ನವದೆಹಲಿ (ಪಿಟಿಐ): ಭಾರತ ಡೇವಿಸ್ ಕಪ್ ತಂಡ, 55 ವರ್ಷಗಳ ನಂತರ ಮೊದಲ ಬಾರಿ ಪಾಕಿಸ್ತಾನಕ್ಕೆ ತೆರಳುವ ಸಾಧ್ಯತೆಯಿದೆ. ಸೆಪ್ಟೆಂಬರ್‌ನಲ್ಲಿ ನಡೆ ಯುವ ಸ್ಪರ್ಧೆಗೆ ಕೇಂದ್ರ ಸರ್ಕಾರ ಅನುಮತಿ ನೀಡಲಿದೆ ಎಂದು ಅಖಿಲ ಭಾರತ ಟೆನಿಸ್ ಸಂಸ್ಥೆ ಸುಳಿವು ನೀಡಿದೆ.
1964ರ ಮಾರ್ಚ್‌ನಲ್ಲಿ ಕೊನೆಯ ಬಾರಿ ಭಾರತ ತಂಡ, ಪಾಕಿಸ್ತಾನಕ್ಕೆ ಹೋಗಿತ್ತು. ಆ ವರ್ಷ ಲಾಹೋರ್‌ನಲ್ಲಿ ನಡೆದ ಹಣಾಹಣಿಯಲ್ಲಿ ಭಾರತ 4–0 ಯಿಂದ ಜಯಗಳಿಸಿತ್ತು.
‘ನಾವು ಕೇಂದ್ರಕ್ಕೆ ಪತ್ರ ಬರೆದಿದ್ದು, ಪಾಕಿಸ್ತಾನಕ್ಕೆ ಹೋಗುವ ವಿಶ್ವಾಸವಿದೆ. ನಮ್ಮಲ್ಲಿ ಆ ಭಾವನೆ ಮೂಡಿದೆ’ ಎಂದು ಎಐಟಿಎ ಮಹಾ ಕಾರ್ಯದರ್ಶಿ ಹಿರಣ್ಮಯ್ ಚಟರ್ಜಿ ಬುಧವಾರ ಸುದ್ದಿಸಂಸ್ಥೆಗೆ ತಿಳಿಸಿದರು. ಭಾರತ–ಪಾಕ್ ಪಂದ್ಯದ ವಿಜೇತರು ವಿಶ್ವ ಗುಂಪಿನ ಅರ್ಹತಾ ಸುತ್ತಿಗೆ ತೇರ್ಗಡೆಯಾಗುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.