ADVERTISEMENT

ಅಂಗಣಕ್ಕೆ ನೊವಾಕ್ ಜೊಕೊವಿಚ್‌: ಅದ್ದೂರಿ ಸ್ವಾಗತ

ಏಜೆನ್ಸೀಸ್
Published 23 ಫೆಬ್ರುವರಿ 2022, 2:12 IST
Last Updated 23 ಫೆಬ್ರುವರಿ 2022, 2:12 IST
ನೊವಾಕ್ ಜೊಕೊವಿಚ್‌– ಎಎಫ್‌ಪಿ ಚಿತ್ರ
ನೊವಾಕ್ ಜೊಕೊವಿಚ್‌– ಎಎಫ್‌ಪಿ ಚಿತ್ರ   

ದುಬೈ: ಕೋವಿಡ್‌ ಲಸಿಕೆ ತೆಗೆದುಕೊಳ್ಳದ ಕಾರಣ ಆಸ್ಟ್ರೇಲಿಯಾ ಓಪನ್ ಟೂರ್ನಿಯಲ್ಲಿ ಆಡುವುದರಿಂದ ವಂಚಿತರಾಗಿದ್ದ ವಿಶ್ವದ ಅಗ್ರ ಕ್ರಮಾಂಕದ ಟೆನಿಸ್ ಆಟಗಾರ ನೊವಾಕ್ ಜೊಕೊವಿಚ್‌ ಅವರು ಇಲ್ಲಿ ನಡೆದ ಟೂರ್ನಿಯಲ್ಲಿ ಶುಭಾರಂಭ ಮಾಡಿದರು.

ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ಸ್ವೀಕರಿಸಿದ ಸರ್ಬಿಯಾ ಆಟಗಾರ, ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಪಂದ್ಯದಲ್ಲಿ6-3, 6-3ರಿಂದ ಇಟಲಿಯ ಲೊರೆಂಜೊ ಮುಸೆಟ್ಟಿ ಅವರನ್ನು ಸೋಲಿಸಿದರು.

ಕ್ರೀಡಾಂಗಣದಲ್ಲಿ ಕಿಕ್ಕಿರಿದು ಸೇರಿದ್ದ ಪ್ರೇಕ್ಷಕರು ಜೊಕೊವಿಚ್ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಜೊಕೊವಿಚ್ ‘ಅಭಿಮಾನಿಗಳು ನೀಡಿದ ಸ್ವಾಗತ ನಿರೀಕ್ಷೆ ಮೀರಿದೆ‘ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.