ರೋಮ್: ಸ್ವಿಟ್ಜರ್‌ಲೆಂಡ್‌ನ ರೋಜರ್ ಫೆಡರರ್ ಅವರು ಮುಂದಿನ ವಾರ ನಡೆಯುವ ಇಟಾಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ.
ಈ ತಿಂಗಳ ಅಂತ್ಯದಲ್ಲಿ ನಿಗದಿಯಾಗಿರುವ ಫ್ರೆಂಚ್ ಓಪನ್ ಟೂರ್ನಿಗೆ ಪೂರ್ವಭಾವಿ ಸಿದ್ಧತೆ ಕೈಗೊಳ್ಳುವ ಉದ್ದೇಶದಿಂದ ಇಟಾಲಿಯನ್ ಓಪನ್‌ನಲ್ಲಿ ಆಡಲು ತೀರ್ಮಾನಿಸಿರುವುದಾಗಿ ಅವರು ತಿಳಿಸಿದ್ದಾರೆ.
ಗ್ರ್ಯಾನ್‌ಸ್ಲಾಮ್‌ನಲ್ಲಿ 20 ಪ್ರಶಸ್ತಿಗಳನ್ನು ಗೆದ್ದ ಹಿರಿಮೆ ಹೊಂದಿರುವ ರೋಜರ್, ಶುಕ್ರವಾರ ನಡೆದಿದ್ದ ಮ್ಯಾಡ್ರಿಡ್ ಓಪನ್ ಟೂರ್ನಿಯ ಕ್ವಾರ್ಟರ್ ಫೈನಲ್‌ನಲ್ಲಿ ಆಸ್ಟ್ರಿಯಾದ ಡಾಮಿನಿಕ್ ಥೀಮ್ ಎದುರು ಸೋತಿದ್ದರು.
ಇಟಾಲಿಯನ್ ಓಪನ್‌ನ ಮೊದಲ ಸುತ್ತಿನಲ್ಲಿ ಸ್ವಿಟ್ಜರ್‌ಲೆಂಡ್‌ನ ಆಟಗಾರನಿಗೆ ‘ಬೈ’ ಲಭಿಸಿದೆ. ಟೂರ್ನಿಯಲ್ಲಿ ಮೂರನೇ ಶ್ರೇಯಾಂಕ ಪಡೆದಿರುವ ರೋಜರ್‌ಗೆ ಎರಡನೇ ಸುತ್ತಿನಲ್ಲಿ ಫ್ರಾನ್ಸ್‌ನ ತಿಯಾಫೊ ಅಥವಾ ಜಾವೊ ಸೌಸಾ ಸವಾಲು ಎದುರಾಗುವ ನಿರೀಕ್ಷೆ ಇದೆ.
ವಿಶ್ವ ರ‍್ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನ ಹೊಂದಿರುವ ರೋಜರ್, ಇಟಾಲಿಯನ್ ಓಪನ್‌ನಲ್ಲಿ ಒಮ್ಮೆಯೂ ಪ್ರಶಸ್ತಿ ಜಯಿಸಿಲ್ಲ. ನಾಲ್ಕು ಸಲ ರನ್ನರ್ ಅಪ್ ಆಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.