ನೊವಾಕ್ ಜೊಕೊವಿಚ್
(ಚಿತ್ರ ಕೃಪೆ: ಫ್ರೆಂಚ್ ಓಪನ್)
ಪ್ಯಾರಿಸ್: ದಾಖಲೆಯ 25ನೇ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿಯ ಹುಡುಕಾಟದಲ್ಲಿರುವ ಸರ್ಬಿಯಾದ ತಾರೆ ನೊವಾಕ್ ಜೊಕೊವಿಚ್, ಪ್ರತಿಷ್ಠಿತ ಫ್ರೆಂಚ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯಲ್ಲಿ ಮೂರನೇ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ.
ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಆರನೇ ಶ್ರೇಯಾಂಕಿತ ಜೊಕೊವಿಚ್ ಅವರು ಫ್ರಾನ್ಸ್‌ನ ಕೊರೆಂಟಿನ್ ಮೌಟೆಟ್ ವಿರುದ್ಧ 6-3, 6-2, 7-6 (1)ರ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಪಂದ್ಯದ ನಡುವೆ ಜೊಕೊವಿಚ್ ಗಾಯದ ಸಮಸ್ಯೆ ಉಲ್ಬಣಿಸಿತ್ತು. ಆದರೆ ಛಲ ಬಿಡದ 38 ವರ್ಷದ ಜೊಕೊವಿಚ್, ಅಂತಿಮವಾಗಿ ಗೆಲುವಿನ ನಗೆ ಬೀರಿದ್ದಾರೆ.
ಆದರೂ ಮುಂದಿನ ಪಂದ್ಯದ ವೇಳೆಗೆ ಫಿಟ್ ಆಗುವರೇ ಎಂಬುದರ ಕುರಿತು ಆತಂಕ ಮನೆ ಮಾಡಿದೆ.
ಈ ಹಿಂದೆ ಜೊಕೊವಿಚ್ ಮೂರು ಸಲ ಫ್ರೆಂಚ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿ ಗೆದ್ದಿದ್ದಾರೆ. 2016, 2021 ಹಾಗೂ 2023ರಲ್ಲಿ ಚಾಂಪಿಯನ್ ಆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.