ADVERTISEMENT

ವಿಂಬಲ್ಡನ್‌ ಟೆನಿಸ್‌ ಟೂರ್ನಿ: ಸೆಮಿಫೈನಲ್‌ ಪ್ರವೇಶಿಸಿದ ನೊವಾಕ್‌ ಜೊಕೊವಿಚ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಜುಲೈ 2023, 5:45 IST
Last Updated 12 ಜುಲೈ 2023, 5:45 IST
ಗೆಲುವಿನ ಖುಷಿ...ಸರ್ಬಿಯಾದ ನೊವಾಕ್‌ ಜೊಕೊವಿಚ್‌ ಸಂಭ್ರಮ 	–ರಾಯಿಟರ್ಸ್‌ ಚಿತ್ರ
ಗೆಲುವಿನ ಖುಷಿ...ಸರ್ಬಿಯಾದ ನೊವಾಕ್‌ ಜೊಕೊವಿಚ್‌ ಸಂಭ್ರಮ –ರಾಯಿಟರ್ಸ್‌ ಚಿತ್ರ   

ಲಂಡನ್‌ (ಎಎಫ್‌ಪಿ/ ರಾಯಿಟರ್ಸ್): ವಿಶ್ವದ ಅಗ್ರಮಾನ್ಯ ಆಟಗಾರ ಸರ್ಬಿಯದ ನೊವಾಕ್‌ ಜೊಕೊವಿಚ್‌, ಕ್ವಾರ್ಟರ್‌ಫೈನಲ್‌ನಲ್ಲಿ ಆ್ಯಂಡ್ರೆ ರುಬ್ಲೆವ್‌ ಅವರನ್ನು ಮಣಿಸಿ ವಿಂಬಲ್ಡನ್‌ ಟೆನಿಸ್‌ ಟೂರ್ನಿಯ ಪುರುಷರ ಸಿಂಗಲ್ಸ್‌ ವಿಭಾಗದ ಸೆಮಿಫೈನಲ್‌ ಪ್ರವೇಶಿಸಿದರು.

ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಆ್ಯಂಡ್ರೆ ರುಬ್ಲೆವ್‌ ವಿರುದ್ಧ 4-6, 6-1, 6-4, 6-3 ರಿಂದ ಗೆದ್ದು ಸೆಮಿಫೈನಲ್‌ ಪ್ರವೇಶಿಸಿದರು. ಈ ಮೂಲಕ ಅವರು ವಿಂಬಲ್ಡನ್‌ ಟೆನಿಸ್‌ ಟೂರ್ನಿಯಲ್ಲಿ 12ನೇ ಸಲ ಸೆಮಿಫೈನಲ್‌ ಪ್ರವೇಶಿಸಿದರು.

ನೊವಾಕ್‌ ಜೊಕೊವಿಚ್‌ ಕಳೆದ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿ ಗೆದ್ದಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.