ಪ್ಯಾರಿಸ್ : ವಿಶ್ವ ರ್ಯಾಂಕಿಂಗ್ನಲ್ಲಿ ಮೂರನೇ ಸ್ಥಾನದಲ್ಲಿರುವ ರೋಜರ್ ಫೆಡರರ್ ಈ ವಾರ ಆರಂಭವಾಗಲಿರುವ ಪ್ಯಾರಿಸ್ ಮಾಸ್ಟರ್ಸ್ ಟೆನಿಸ್ ಟೂರ್ನಿಯಲ್ಲಿ ಆಡದೇ ಇರಲು ನಿರ್ಧರಿಸಿದ್ದಾರೆ. ಮುಂದಿನ ವರ್ಷದ ಟೂರ್ನಿಗಳಿಗಾಗಿ ಸಜ್ಜುಗೊಳ್ಳುವ ಉದ್ದೇಶದಿಂದ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದ್ದಾರೆ.
‘ಪ್ಯಾರಿಸ್ ಓಪನ್ನಲ್ಲಿ ಆಡದೇ ಇರಲು ನಿರ್ಧರಿಸಿರುವುದು ಫ್ರಾನ್ಸ್ನ ಅಭಿಮಾನಿಗಳಿಗೆ ಬೇಸರ ತಂದಿದೆ ಎಂದು ಗೊತ್ತಿದೆ. ಇದಕ್ಕೆ ಕ್ಷಮೆ ಕೋರುತ್ತೇನೆ. ನಾನು ಫಿಟ್ ಆಗಿದ್ದು ಯಾವುದೇ ಸಮಸ್ಯೆಗಳಿಲ್ಲ. ಆದರೂ ಮುಂದಿನ ವರ್ಷದ ಮಹತ್ವದ ಟೂರ್ನಿಗಳಿಗಾಗಿ ಈ ಟೂರ್ನಿಯಿಂದ ದೂರ ಉಳಿಯಬೇಕಾಗಿದೆ’ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.