ADVERTISEMENT

ಡಬ್ಲ್ಯುಟಿಎ ಫೈನಲ್ಸ್‌: ಹಿಂದೆ ಸರಿದ ಸಿಮೊನಾ

ಏಜೆನ್ಸೀಸ್
Published 19 ಅಕ್ಟೋಬರ್ 2018, 18:55 IST
Last Updated 19 ಅಕ್ಟೋಬರ್ 2018, 18:55 IST
ಸಿಮೊನಾ
ಸಿಮೊನಾ   

ಸಿಂಗಪುರ: ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸಿಮೊನಾ ಹಲೆಪ್‌ ಸಿಂಗಪುರದಲ್ಲಿ ನಡೆಯುವ ಡಬ್ಲ್ಯುಟಿಎ ಫೈನಲ್ಸ್‌ ಟೆನಿಸ್‌ ಟೂರ್ನಿಗೆ ಅಲಭ್ಯರಾಗಿದ್ದಾರೆ.

ಬೆನ್ನು ನೋವಿನ ಕಾರಣ ಅವರು ಟೂರ್ನಿಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.ಫ್ರೆಂಚ್‌ ಓಪನ್‌ನಲ್ಲಿ ಚಾಂಪಿಯನ್‌ ಆಗಿದ್ದ ರುಮೇನಿಯಾದ ಆಟಗಾರ್ತಿ ಸಿಮೊನಾ, ಹೋದ ತಿಂಗಳು ನಡೆದಿದ್ದ ಚೀನಾ ಓಪನ್‌ನಲ್ಲೂ ಕಣಕ್ಕಿಳಿದಿರಲಿಲ್ಲ.

‘ಬೆನ್ನು ನೋವು ಇನ್ನೂ ಕಡಿಮೆಯಾಗಿಲ್ಲ. ನಾಲ್ಕು ವಾರಗಳಿಂದ ಅಭ್ಯಾಸವನ್ನೂ ನಡೆಸಿಲ್ಲ. ಹೀಗಿರುವಾಗ ಡಬ್ಲ್ಯುಟಿಎಯಂತಹ ಮಹತ್ವದ ಟೂರ್ನಿಯಲ್ಲಿ ಭಾಗವಹಿಸುವುದು ಕಷ್ಟ. ಆದ್ದರಿಂದಲೇ ಟೂರ್ನಿಯಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ಸಿಮೊನಾ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.