ಮಣಿಕಾ ಬಾತ್ರಾ
ನವದೆಹಲಿ: ಕಾಮೆನ್‌ವೆಲ್ತ್ ಚಿನ್ನದ ಪದಕ ವಿಜೇತೆ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಅವರ ತಂದೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಗಳವಾರ ಮಣಿಕಾ ಅವರ ತಂದೆ ಗಿರೀಶ್ ಮೃತಪಟ್ಟಿದ್ದು, ಅದೇ ದಿನ ಇಂದರ್‌ಪುರಿಯಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.
29 ವರ್ಷ ವಯಸ್ಸಿನ ಮಣಿಕಾ, 2018ರ ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳಾ ಸಿಂಗಲ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದರು. ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ ಎಂಬ ಹಿರಿಮೆಗೂ ಪಾತ್ರರಾಗಿದ್ದರು. ಆ ಕೂಟದಲ್ಲಿ ಅವರು ಎರಡು ಚಿನ್ನ ಸೇರಿದಂತೆ ಒಟ್ಟು ನಾಲ್ಕು ಪದಕಗಳಿಗೆ ಕೊರಳೊಡ್ಡಿದ್ದರು.
ಅದೇ ವರ್ಷ ಜಕಾರ್ತದಲ್ಲಿ ನಡೆದಿದ್ದ ಏಷ್ಯನ್ ಕ್ರೀಡಾಕೂಟದ ಮಿಶ್ರ ಡಬಲ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.