
ಪಿಟಿಐ
ಸಾಂದರ್ಭಿಕ ಚಿತ್ರ
ಹೀಲ್‌ಬ್ರಾನ್, (ಜರ್ಮನಿ): ಭಾರತದ ಅಗ್ರಮಾನ್ಯ ಟೆನಿಸ್ ಸಿಂಗಲ್ಸ್ ಆಟಗಾರ ಸುಮಿತ್ ನಗಾಲ್ ಅವರು ಇಲ್ಲಿ ನಡೆಯುತ್ತಿರುವ ಎಟಿಪಿ 100 ಚಾಲೆಂಜರ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದರು.
ವಿಶ್ವ ರ್‍ಯಾಂಕಿಂಗ್‌ನಲ್ಲಿ 95ನೇ ಸ್ಥಾನದಲ್ಲಿರುವ ನಗಾಲ್, ಶುಕ್ರವಾರ ಕ್ವಾರ್ಟರ್ ಫೈನಲ್‌ನಲ್ಲಿ 6-1, 7-6 (7-4) ರಿಂದ ರಷ್ಯಾದ ಇವಾನ್ ಗಕೋವ್ ಅವರನ್ನು ಮಣಿಸಿ ಮುನ್ನಡೆದರು.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಸಿಂಗಲ್ಸ್ ಸ್ಪರ್ಧೆಗೆ ಅರ್ಹತೆ ಗಳಿಸುವ ನಿಟ್ಟಿನಲ್ಲಿ ರ‍್ಯಾಂಕಿಂಗ್ ಪಾಯಿಂಟ್ಸ್ ಸಂಪಾದಿಸುವತ್ತಾ ನಗಾಲ್ ಚಿತ್ತ ಹರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.