ADVERTISEMENT

ಟೆನಿಸ್‌: ಜೊಕೊವಿಚ್‌ಗೆ ಕಿರೀಟ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2018, 20:29 IST
Last Updated 14 ಅಕ್ಟೋಬರ್ 2018, 20:29 IST
ಪ್ರಶಸ್ತಿಗೆ ಮುತ್ತಿಕ್ಕಿದ ನೊವಾಕ್‌ ಜೊಕೊವಿಚ್‌ –ಎಎಫ್‌ಪಿ ಚಿತ್ರ
ಪ್ರಶಸ್ತಿಗೆ ಮುತ್ತಿಕ್ಕಿದ ನೊವಾಕ್‌ ಜೊಕೊವಿಚ್‌ –ಎಎಫ್‌ಪಿ ಚಿತ್ರ   

ಶಾಂಘೈ (ಎಎಫ್‌ಪಿ/ರಾಯಿಟರ್ಸ್‌): ಸರ್ಬಿಯಾದ ನೊವಾಕ್‌ ಜೊಕೊವಿಚ್‌, ಶಾಂಘೈ ಮಾಸ್ಟರ್ಸ್‌ ಟೆನಿಸ್‌ ಟೂರ್ನಿಯಲ್ಲಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ಭಾನುವಾರ ನಡೆದ ಪುರುಷರ ಸಿಂಗಲ್ಸ್‌ ಫೈನಲ್‌ನಲ್ಲಿ ನೊವಾಕ್‌ 6–3, 6–4ರ ನೇರ ಸೆಟ್‌ಗಳಿಂದ ಕ್ರೊವೇಷ್ಯಾದ ಬೊರ್ನಾ ಕೊರಿಕ್‌ ಅವರನ್ನು ಪರಾಭವಗೊಳಿಸಿದರು. ಇದರೊಂದಿಗೆ ಟೂರ್ನಿಯಲ್ಲಿ ನಾಲ್ಕನೇ ಪ್ರಶಸ್ತಿ ಗೆದ್ದ ಹಿರಿಮೆ ತಮ್ಮದಾಗಿಸಿಕೊಂಡರು.

ಮೊದಲ ಸೆಟ್‌ನಲ್ಲಿ ಜೊಕೊವಿಚ್‌ ಮಿಂಚಿದರು. ಆಕರ್ಷಕ ಗ್ರೌಂಡ್‌ಸ್ಟ್ರೋಕ್‌ಗಳ ಮೂಲಕ ಎದುರಾಳಿಯನ್ನು ತಬ್ಬಿಬ್ಬುಗೊಳಿಸಿದರು. ಆರನೇ ಗೇಮ್‌ನಲ್ಲಿ ಕೊರಿಕ್‌ ಸರ್ವ್‌ ಮುರಿದ ಅವರು 3–2ರ ಮುನ್ನಡೆ ಗಳಿಸಿದರು. ಮರು ಗೇಮ್‌ನಲ್ಲಿ ತಿರುಗೇಟು ನೀಡಿದ ಬೊರ್ನಾ 3–3ರಲ್ಲಿ ಸಮಬಲ ಸಾಧಿಸಿದರು. ನಂತರ ಜೊಕೊವಿಚ್‌ ಆಟ ರಂಗೇರಿತು. ಶರವೇಗದ ಸರ್ವ್‌ ಮತ್ತು ಮನಮೋಹಕ ಡ್ರಾಪ್‌ಗಳ ಮೂಲಕ ಗೇಮ್‌ ಜಯಿಸಿ ಸೆಟ್‌ ತಮ್ಮದಾಗಿಸಿಕೊಂಡರು.

ADVERTISEMENT

ಎರಡನೇ ಸೆಟ್‌ನ ಶುರುವಿನಿಂದಲೇ ಉಭಯ ಆಟಗಾರರು ಜಿದ್ದಾಜಿದ್ದಿನ ಪೈಪೋಟಿ ನಡೆಸಿದರು. ಹೀಗಾಗಿ 4–4ರ ಸಮಬಲ ಕಂಡುಬಂತು. ಈ ಹಂತದಲ್ಲಿ 31 ವರ್ಷ ವಯಸ್ಸಿನ ಜೊಕೊವಿಚ್‌ ಮಿಂಚಿದರು. ದೀರ್ಘ ರ‍್ಯಾಲಿಗಳನ್ನು ಆಡಿದ ಅವರು ಬೇಸ್‌ಲೈನ್‌ ಹೊಡೆತಗಳ ಮೂಲಕ ಕೊರಿಕ್‌ ಅವರನ್ನು ಕಂಗೆಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.