ಟೋಕಿಯೊ: ಜಪಾನ್‌ನ ಆಟಗಾರ್ತಿ ನವೊಮಿ ಒಸಾಕಬೆನ್ನು ನೋವಿನಿಂದ ಬಳಲುತ್ತಿದ್ದು, ಮುಂದಿನ ವಾರ ನಡೆಯಲಿರುವ ಕತಾರ್ ಓಪನ್ ಟೆನಿಸ್ ಟೂರ್ನಿ ಗೆ ಅಲಭ್ಯರಾಗಿ ದ್ದಾರೆ ಎಂದು ಟೂರ್ನಿಯ ಆಯೋಜಕರು ತಿಳಿಸಿದ್ದಾರೆ.
ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪ್ರಶಸ್ತಿ ಗೆದ್ದ ನಂತರ ಒಸಾಕ ತೀವ್ರ ಬೆನ್ನು ನೋವಿಗೆ ಒಳಗಾಗಿದ್ದರು.
ಸಿಮೋನ ಹಲೆಪ್, ಕರೊಲಿನಾ ಪಿಸ್ಕೋವ ಮತ್ತು ಏಂಜೆಲಿಕ್ ಕರ್ಬರ್ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಟೂರ್ನಿ ಫೆಬ್ರುವರಿ 11ರಂದು ಆರಂಭವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.