ಮುಂಬೈ: ಏಳನೇ ಆವೃತ್ತಿಯ ಟೆನಿಸ್ ಪ್ರೀಮಿಯರ್ ಲೀಗ್ (ಟಿಪಿಎಲ್) ಡಿಸೆಂಬರ್ 9ರಿಂದ 14ರವರೆಗೆ ಅಹಮದಾಬಾದ್‌ನಲ್ಲಿ ನಡೆಯಲಿದೆ.
ಎಂಟು ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಎರಡು ಬಾರಿಯ ಗ್ರ್ಯಾನ್‌ಸ್ಲಾಮ್ ವಿಜೇತ ರೋಹನ್ ಬೋಪಣ್ಣ ಸೇರಿ ಪ್ರಮುಖ ಆಟಗಾರರು ಕಣಕ್ಕಿಳಿಯಲಿದ್ದಾರೆ. ಅಹಮದಾಬಾದ್‌ನ ಗುಜರಾತ್ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ.
ಟೂರ್ನಿಯು ಇದೇ ಮೊದಲ ಬಾರಿಗೆ ಮಹಾರಾಷ್ಟ್ರದಿಂದ ಹೊರಗೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.