ನವದೆಹಲಿ: ಭಾರತದ ಟೆನಿಸ್ ಆಟಗಾರ ಪ್ರಜ್ಞೇಶ್ ಗುಣೇಶ್ವರನ್, ಸೋಮವಾರ ಬಿಡುಗಡೆಯಾಗಿರುವ ಎಟಿಪಿ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ 80ನೇ ಸ್ಥಾನಕ್ಕೇರಿದ್ದಾರೆ.
ಇದು ಪ್ರಜ್ಞೇಶ್ ಅವರ ವೈಯಕ್ತಿಕ ಶ್ರೇಷ್ಠ ಸಾಧನೆಯಾಗಿದೆ.
ಚೆನ್ನೈನ 29 ವರ್ಷದ ಆಟಗಾರ, ಈ ವರ್ಷದ ಫೆಬ್ರುವರಿಯಲ್ಲಿ ಅಗ್ರ 100ರೊಳಗೆ ಸ್ಥಾನ ಗಳಿಸಿದ ಸಾಧನೆ ಮಾಡಿದ್ದರು. ಪ್ರಜ್ಞೇಶ್ ಅವರು ಈ ಮೊದಲು 82ನೇ ಸ್ಥಾನದಲ್ಲಿದ್ದರು. ಇಂಡಿಯಾನ ವೆಲ್ಸ್ ಟೂರ್ನಿಯಲ್ಲಿ ಮೂರನೇ ಸುತ್ತು ಪ್ರವೇಶಿಸಿದ್ದ ಅವರು ಎರಡು ಸ್ಥಾನ ಬಡ್ತಿ ಹೊಂದಿದ್ದಾರೆ.
ಬಿಎನ್‌ಪಿ ಪರಿಬಾಸ್ ಓಪನ್‌ನಲ್ಲಿ ಮೂರನೇ ಸುತ್ತಿಗೆ ಲಗ್ಗೆ ಇಟ್ಟಿದ್ದ ಪ್ರಜ್ಞೇಶ್, ಮಿಯಾಮಿ ಓಪನ್‌ನಲ್ಲಿ ಮುಖ್ಯ ಸುತ್ತು ಪ್ರವೇಶಿಸಿದ್ದರು.
ರಾಮಕುಮಾರ್ ರಾಮನಾಥನ್ ಅವರು 157ನೇ ಸ್ಥಾನಕ್ಕೆ ಇಳಿದಿದ್ದಾರೆ. ಅವರು 16 ಸ್ಥಾನ ಕಳೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.