ನೊವಾಕ್ ಜೊಕೊವಿಚ್, ಕಾರ್ಲೋಸ್ ಅಲ್ಕರಾಜ್
(ಚಿತ್ರ ಕೃಪೆ: X/@usopen)
ನ್ಯೂಯಾರ್ಕ್: ಪ್ರತಿಷ್ಠಿತ ಅಮೆರಿಕ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಸರ್ಬಿಯಾದ ತಾರೆ ನೊವಾಕ್ ಜೊಕೊವಿಚ್ ಹಾಗೂ ಸ್ಪೇನ್‌ನ ಯುವ ತಾರೆ ಕಾರ್ಲೋಸ್ ಅಲ್ಕರಾಜ್ ಸೆಮಿಫೈನಲ್‌ಗೆ ಪ್ರವೇಶಿಸಿದ್ದಾರೆ.
ಇದರೊಂದಿಗೆ ಅಂತಿಮ ನಾಲ್ಕರ ಘಟ್ಟದಲ್ಲಿ ಇಬ್ಬರು ತಾರೆಗಳ ಹೋರಾಟಕ್ಕೆ ವೇದಿಕೆ ಸಿದ್ಧಗೊಂಡಿದೆ.
ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್‌ನಲ್ಲಿ ಏಳನೇ ಶ್ರೇಯಾಂಕಿತ ಜೊಕೊವಿಚ್ ಅವರು, ನಾಲ್ಕನೇ ಶ್ರೇಯಾಂಕಿತ ಅಮೆರಿಕದ ಟೇಲರ್ ಫ್ರಿಟ್ಜ್ ವಿರುದ್ಧ 6-3, 7-5, 3-6, 6-4ರ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
38 ವರ್ಷದ ಜೊಕೊವಿಚ್ ದಾಖಲೆಯ 25ನೇ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದಾರೆ. ನಾಲ್ಕು ಬಾರಿಯ ಅಮೆರಿಕ ಓಪನ್ ಚಾಂಪಿಯನ್ ಆಗಿರುವ ಜೊಕೊವಿಚ್, ಕೊನೆಯದಾಗಿ 2023ರಲ್ಲಿ ಪ್ರಶಸ್ತಿ ಗೆದ್ದಿದ್ದರು.
ಮತ್ತೊಂದೆಡೆ 22 ವರ್ಷದ ಸ್ಪೇನ್‌ನ ತಾರೆ ಅಲ್ಕರಾಜ್ ಅವರು 20ನೇ ಶ್ರೇಯಾಂಕದ ಜೆಕ್ ಗಣರಾಜ್ಯದ ಜಾರ್ಜ್ ಲೆಹೆಕಾ ವಿರುದ್ಧ 6-4, 6-2, 6-4ರ ನೇರ ಸೆಟ್‌ಗಳ ಅಂತರದಲ್ಲಿ ಮಣಿಸಿ ಮುನ್ನಡೆದಿದ್ದಾರೆ.
ಟೂರ್ನಿಯಲ್ಲಿ ಎರಡನೇ ಶ್ರೇಯಾಂಕಿತ ಅಲ್ಕರಾಜ್, ಎರಡನೇ ಅಮೆರಿಕನ್ ಓಪನ್ ಕಿರೀಟದ ಹುಡುಕಾಟದಲ್ಲಿದ್ದಾರೆ. ಅಲ್ಲದೆ ತಮ್ಮ ವೃತ್ತಿ ಜೀವನದಲ್ಲಿ ಈವರೆಗೆ ಐದು ಬಾರಿ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಅಲ್ಕರಾಜ್ ಕೊನೆಯದಾಗಿ 2022ರಲ್ಲಿ ಯುಎಸ್ ಓಪನ್ ಚಾಂಪಿಯನ್ ಆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.