ನ್ಯೂಯಾರ್ಕ್: ಅಮೆರಿಕ ಓಪನ್ ಟೆನಿಸ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಆಲೀಯಾಸೀಮ್ ಅವರನ್ನು 6-1, 3-6, 6-3, 6-4 ಸೆಟ್‌ಗಳ ಅಂತರದಲ್ಲಿ ಸೋಲಿಸುವ ಮೂಲಕ ಹಾಲಿ ಚಾಂಪಿಯನ್ ಯಾನಿಕ್ ಸಿನ್ನರ್ ಅವರು ಫೈನಲ್ ಪ್ರವೇಶಿಸಿದ್ದಾರೆ.
ಇಟಲಿಯ ಸಿನ್ನರ್ ಅವರು ಫೈನಲ್ ಪಂದ್ಯದಲ್ಲಿ ಸ್ಪೇನ್ ಆಟಗಾರ ಅಲ್ಕರಾಜ್ ಅವರನ್ನು ಎದುರಿಸಲಿದ್ದಾರೆ. ಸತತ ಮೂರನೇ ಗ್ರ್ಯಾನ್‌ಸ್ಲಾಮ್ ಫೈನಲ್‌ನಲ್ಲಿ ಸಿನ್ನರ್ – ಅಲ್ಕರಾಜ್ ಮುಖಾಮುಖಿಯಾಗಲಿದ್ದಾರೆ.
ಅಲ್ಕರಾಜ್ ಅವರು ಸೆಮಿಫೈನಲ್‌ನಲ್ಲಿ ಜೋಕೋವಿಕ್ ಅವರನ್ನು ಸೋಲಿಸಿ, ಫೈನಲ್ ಪ್ರವೇಶಿಸಿದ್ದರು.
ವಿಶ್ವದ ಅಗ್ರಮಾನ್ಯ ಆಟಗಾರ ಸಿನ್ನರ್ ಅವರು ಫೈನಲ್ ಪಂದ್ಯದಲ್ಲಿ ಗೆದ್ದರೆ, ಅಮೆರಿಕ ಓಪನ್ ಟೆನಿಸ್ ಟೂರ್ನಿಯಲ್ಲಿ ಸತತ ಎರಡು ಬಾರಿ ಪ್ರಶಸ್ತಿ ಗೆದ್ದ ಎರಡನೇ ಆಟಗಾರ ಎನ್ನುವ ಹಿರಿಮೆಗೆ ಪಾತ್ರವಾಗಲಿದ್ದಾರೆ. 2004 ರಿಂದ 2008ರ ವರೆಗೆ ಸತತವಾಗಿ ಐದು ವರ್ಷ ಚಾಂಪಿಯನ್ ಆಗಿರುವ ದಾಖಲೆ ಫೆಡೆರರ್ ಅವರ ಹೆಸರಿನಲ್ಲಿದೆ.
ಭಾನುವಾರ ನಡೆಯಲಿರುವ ಫೈನಲ್ ಪಂದ್ಯಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಆಗಮಿಸುವ ನಿರೀಕ್ಷೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.