ಪ್ರಾತಿನಿಧಿಕ ಚಿತ್ರ
ಬೆಂಗಳೂರು: ರಾಜ್ಯ ವ್ಹೀಲ್‌ಚೇರ್ ಟೆನಿಸ್ ಅಸೋಸಿಯೇಷನ್ ಆಶ್ರಯದಲ್ಲಿ ಮೊದಲ ಬಾರಿಗೆ ರಾಷ್ಟ್ರಮಟ್ಟದ ವ್ಹೀಲ್‌ಚೇರ್ ಟೆನಿಸ್ ಟೂರ್ನಿ ಬುಧವಾರ ನಡೆಯಲಿವೆ.
ನಗರದ ಕಬ್ಬನ್ ಪಾರ್ಕ್‌ನಲ್ಲಿರುವ ಕೆಎಸ್‌ಎಲ್‌ಟಿಎ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಪಂದ್ಯಗಳು ಆರಂಭವಾಗಲಿವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಆಯುಕ್ತ ಮಹೇಶ್ವರ ರಾವ್ ಹಾಗೂ ಕ್ರೀಡಾ ಮತ್ತು ಯುವ ವ್ಯವಹಾರಗಳ ಆಯುಕ್ತ ಚೇತನ್ ಸ್ಪರ್ಧೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ಕೆಎಸ್‌ಎಲ್‌ಟಿಎ ಅಧ್ಯಕ್ಷ ಬಿ.ಆರ್. ಚಂದ್ರಕಾಂತ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.