ADVERTISEMENT

ವಿಂಬಲ್ಡನ್‌ ಟೆನಿಸ್‌ ಫೈನಲ್‌ಗೆ ಪೂರ್ಣ ಪ್ರಮಾಣದ ಪ್ರೇಕ್ಷಕರು

ಏಜೆನ್ಸೀಸ್
Published 15 ಜೂನ್ 2021, 12:02 IST
Last Updated 15 ಜೂನ್ 2021, 12:02 IST
ವಿಂಬಲ್ಡನ್ ಲೋಗೊ
ವಿಂಬಲ್ಡನ್ ಲೋಗೊ   

ಲಂಡನ್‌: ಈ ಬಾರಿಯ ವಿಂಬಲ್ಡನ್ ಟೆನಿಸ್ ಟೂರ್ನಿಯ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯಗಳಿಗೆ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಬ್ರಿಟನ್ ಸರ್ಕಾರ ತಿಳಿಸಿದೆ.

ಕೊರೊನಾ ವೈರಸ್ ಹಾವಳಿಯ ಹಿನ್ನೆಲೆಯಲ್ಲಿ ಹೋದ ವರ್ಷ ಈ ಗ್ರ್ಯಾನ್‌ಸ್ಲಾಮ್ ಟೂರ್ನಿಯನ್ನು ರದ್ದು ಮಾಡಲಾಗಿತ್ತು.

ಇದೇ ತಿಂಗಳ 28ರಿಂದ ಟೂರ್ನಿ ನಡೆಯಲಿದ್ದು, ಜುಲೈ 10 ಮತ್ತು 11ರಂದು ಕ್ರಮವಾಗಿ ಮಹಿಳಾ ಮತ್ತು ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯಗಳು ನಡೆಯಲಿವೆ.

ಇದೇ ಸೆಂಟರ್‌ ಕೋರ್ಟ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯಗಳಿಗೆ ಪೂರ್ಣಪ್ರಮಾಣದ ಅಂದರೆ 15 ಸಾವಿರ ಪ್ರೇಕ್ಷಕರಿಗೆ ಅನುಮತಿ ನೀಡಲಾಗುತ್ತದೆ. ಇನ್ನುಳಿದ ಪಂದ್ಯಗಳಿಗೆ ಕ್ರೀಡಾಂಗಣಗಳ ಆಸನ ಸಾಮರ್ಥ್ಯದ ಶೇಕಡಾ 50ರಷ್ಟು ಮಂದಿಗೆ ಅವಕಾಶ ಕಲ್ಪಿಸಲಾಗುತ್ತದೆ.

ವಿಶ್ವ ಎರಡನೇ ಮಹಾಯುದ್ಧದ ಬಳಿಕ ಮೊದಲ ಬಾರಿ ವಿಂಬಲ್ಡನ್ ಟೂರ್ನಿಯನ್ನು, ಹೋದ ವರ್ಷ ರದ್ದು ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.