
ಪಲೆಕೆಲೆ: ಶ್ರೀಲಂಕಾ ವಿರುದ್ಧದ ಸೂಪರ್–8 ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 51 ರನ್‌ಗಳ ಸುಲಭ ಗೆಲುವು ದಾಖಲಿಸಿದೆ.
ಪಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು ಆರಂಭಿಕ ಬ್ಯಾಟರ್ ಫಿಲ್ ಸಾಲ್ಟ್ (62 ರನ್: 40 ಎಸೆತ) ಅವರ ಅರ್ಧಶತಕದ ನೆರವಿನಿಂದ 20 ಓವರ್‌ಗಳ ಅಂತ್ಯಕ್ಕೆ 9 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿತು.
ಶ್ರೀಲಂಕಾ ಪರ ದುನಿತ್ ವೆಲ್ಲಾಲಗೆ 3 ವಿಕೆಟ್ ಪಡೆದರೆ, ದಿಲ್ಶನ್ ಮಧುಶಂಕ ಹಾಗೂ ತೀಕ್ಷಣ ತಲಾ 2 ವಿಕೆಟ್ ಕಬಳಿಸಿದರು.
147 ರನ್ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡವು ತವರು ಮೈದಾನದಲ್ಲಿ ರನ್ ಗಳಿಸಲು ಪರದಾಡಿತು. ನಾಯಕ ದಾಸುನ್ ಶನಕ (30 ರನ್: 24 ಎಸೆತ) ಬಿಟ್ಟರೆ, ಉಳಿದವರು ಪೆವಿಲಿಯನ್ ಪೆರೇಡ್ ನಡೆಸಿದರು.
ಇಂಗ್ಲೆಂಡ್ ಪರ ವಿಲ್ ಜಾಕ್ಸ್ 3 ವಿಕೆಟ್ ಕಿತ್ತರು. ಜೋಫ್ರಾ ಆರ್ಚರ್, ಲಿಯಾಮ್ ಡಾಸನ್ ಮತ್ತು ಆದಿಲ್ ರಶೀದ್ ತಲಾ 2 ವಿಕೆಟ್ ಕಬಳಿಸುವ ಮೂಲಕ ಲಂಕಾ ತಂಡವನ್ನು 16.4 ಓವರ್‌ಗಳಲ್ಲಿ 95 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.