)ಪಿಟಿಐ ಚಿತ್ರ)
ಅಹಮದಾಬಾದ್: ಭಾರತ ಮತ್ತು ಪಾಕಿಸ್ತಾನ ನಡುವೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಪಂದ್ಯ ವೀಕ್ಷಣೆಗಾಗಿ ಜನಸಾಗರವೇ ಹರಿದು ಬರುತ್ತಿವೆ.
ಅಧಿಕೃತ ಮಾಹಿತಿಗಳ ಪ್ರಕಾರ ಈಗಾಗಲೇ ಟಿಕೆಟ್ ಎಲ್ಲವೂ ಮಾರಾಟವಾಗಿವೆ. ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭವಾಗಲಿದೆ.
ಇಂದು ಬೆಳಿಗ್ಗೆಯಿಂದಲೇ ಸ್ಟೇಡಿಯಂಗೆ ಕ್ರಿಕೆಟ್ ಪ್ರೇಮಿಗಳು ಆಗಮಿಸುತ್ತಿದ್ದಾರೆ. ಮಾಜಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸಹ ಅಹಮದಾಬಾದ್‌ಗೆ ಆಗಮಿಸಿದ್ದಾರೆ.
ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯಕ್ಕೂ ಮುನ್ನ ವಿಶೇಷ ಸಂಗೀತ ಕಾರ್ಯಕ್ರಮವನ್ನು ಬಿಸಿಸಿಐ ಆಯೋಜಿಸಿದೆ. ಸೆಲೆಬ್ರಿಟಿಗಳು ಈ ರೋಚಕ ಹಣಾಹಣಿಯನ್ನು ಕಣ್ತುಂಬಿಕೊಳ್ಳಲಿದ್ದಾರೆ.
ಪೂಜೆ, ಪ್ರಾರ್ಥನೆ...
ಭಾರತದ ಗೆಲುವಿಗಾಗಿ ದೇಶದ ಹಲವು ಕಡೆಗಳಲ್ಲಿ ಪೂಜೆ ನಡೆಸಲಾಗಿದೆ. ಅಭಿಮಾನಿಗಳು ಗೆಲುವುಗಾಗಿ ಪ್ರಾರ್ಥಿಸಿದ್ದಾರೆ.
ಅಭಿಮಾನಿಗಳು ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯವನ್ನು ಹಬ್ಬದಂತೆ ಕೊಂಡಾಡುತ್ತಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಪೊಲೀಸ್ ಕಟ್ಟೆಚ್ಚರ ವಹಿಸಿದ್ದು, ಭಾರಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.