ADVERTISEMENT

ವಿರಾಟ್ ಕೊಹ್ಲಿಗೆ ಹುಟ್ಟುಹಬ್ಬದ ಸಂಭ್ರಮ; ಶುಭಾಶಯಗಳ ಮಹಾಪೂರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ನವೆಂಬರ್ 2023, 7:24 IST
Last Updated 5 ನವೆಂಬರ್ 2023, 7:24 IST
<div class="paragraphs"><p>ವಿರಾಟ್ ಕೊಹ್ಲಿ</p></div>

ವಿರಾಟ್ ಕೊಹ್ಲಿ

   

(ರಾಯಿಟರ್ಸ್ ಚಿತ್ರ)

ಕೋಲ್ಕತ್ತ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ 35ನೇ ವರ್ಷಕ್ಕೆ ಕಾಲಿರಿಸಿದ್ದಾರೆ. ಹುಟ್ಟುಹಬ್ಬದ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿರುವ ವಿರಾಟ್‌ಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿವೆ.

ADVERTISEMENT

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಮಾಜಿ ಕ್ರಿಕೆಟಿಗರು, ಸೆಲೆಬ್ರಿಟಿಗಳು ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ವಿರಾಟ್ ಅವರಿಗೆ ಶುಭಾಶಯ ಸಲ್ಲಿಸಿದ್ದಾರೆ.

ವಿರಾಟ್ ಕೊಹ್ಲಿ ಅವರು ತಮ್ಮ ಹುಟ್ಟುಹಬ್ಬದಂತೆ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ವಿಶ್ವಕಪ್ ಪಂದ್ಯವನ್ನು ಆಡುತ್ತಿದ್ದಾರೆ. ಇದರಂತೆ ವಿರಾಟ್ ಶತಕ ಗಳಿಸಲಿ ಎಂದು ಅಭಿಮಾನಿಗಳು ಶುಭ ಹಾರೈಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲೂ 'ಹ್ಯಾಪಿ ಬರ್ತ್‌ಡೇ ವಿರಾಟ್ ಕೊಹ್ಲಿ', 'ವಿರಾಟ್ ಕೊಹ್ಲಿ' ಹ್ಯಾಶ್‌ಟ್ಯಾಗ್‌ಗಳು ಟ್ರೆಂಡ್ ಆಗಿವೆ.

ವಿರಾಟ್‌ಗೆ ಹುಟ್ಟುಹಬ್ಬದ ಸಂಭ್ರಮ:

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.