ADVERTISEMENT

IND vs NZ: ಧರ್ಮಶಾಲಾದಲ್ಲಿ ಮಳೆಯಾಗುವ ಸಾಧ್ಯತೆ ಇದೆಯೇ ?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಅಕ್ಟೋಬರ್ 2023, 6:23 IST
Last Updated 22 ಅಕ್ಟೋಬರ್ 2023, 6:23 IST
<div class="paragraphs"><p>ಧರ್ಮಶಾಲಾ</p></div>

ಧರ್ಮಶಾಲಾ

   

(ಪಿಟಿಐ ಚಿತ್ರ)

ಧರ್ಮಶಾಲಾ: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದಿನ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.

ADVERTISEMENT

ಪಂದ್ಯಕ್ಕೆ ಮಳೆಯ ಭೀತಿ ಕಾಡುತ್ತಿದೆ ಎಂದು 'ಅಕ್ಯೂವೆದರ್' ಅನ್ನು ಉಲ್ಲೇಖಿಸಿ ಸುದ್ದಿವಾಹಿನಿ ಎನ್‌ಡಿಟಿವಿ ವರದಿ ಮಾಡಿದೆ.

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಟೂರ್ನಿಯಲ್ಲಿ ಈವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಗೆದ್ದಿವೆ. ಅಲ್ಲದೆ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಹಂಚಿಕೊಂಡಿವೆ. ಇಂದು ಗೆದ್ದ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ. ಇದರಿಂದಾಗಿ ನಿಕಟ ಪೈಪೋಟಿ ಏರ್ಪಡುವ ನಿರೀಕ್ಷೆಯಿದೆ.

ಗಾಯಾಳು ಹಾರ್ದಿಕ್ ಪಾಂಡ್ಯ ಅಲಭ್ಯರಾಗಿರುವುದರಿಂದ ಭಾರತ ತಂಡದಲ್ಲಿ ಒಂದು ಅಥವಾ ಎರಡು ಬದಲಾವಣೆ ಕಂಡುಬರುವ ಸಾಧ್ಯತೆಯಿದೆ. ಸೂರ್ಯಕುಮಾರ್ ಯಾದವ್, ಆರ್. ಅಶ್ವಿನ್, ಇಶಾನ್ ಕಿಶನ್ ಹಾಗೂ ಮೊಹಮ್ಮದ್ ಶಮಿ ನಡುವೆ ಯಾರಿಗೆ ಅವಕಾಶ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ರೋಹಿತ್ ಶರ್ಮಾ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.