ADVERTISEMENT

ವಿಶ್ವಕಪ್‌ನ ಶ್ರೇಷ್ಠ ಆಟಗಾರ ಕೊಹ್ಲಿ: ಈವರೆಗೆ ಈ ಸಾಧನೆ ಮಾಡಿದವರ ವಿವರ ಇಲ್ಲಿದೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ನವೆಂಬರ್ 2023, 17:50 IST
Last Updated 19 ನವೆಂಬರ್ 2023, 17:50 IST
<div class="paragraphs"><p>ವಿರಾಟ್‌ ಕೊಹ್ಲಿ</p></div>

ವಿರಾಟ್‌ ಕೊಹ್ಲಿ

   

ರಾಯಿಟರ್ಸ್ ಚಿತ್ರ

ಅಹಮದಾಬಾದ್‌: ಭಾರತದ 'ರನ್‌ ಮಷಿನ್‌' ಖ್ಯಾತಿಯ ವಿರಾಟ್‌ ಕೊಹ್ಲಿ ಈ ಬಾರಿಯ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಶ್ರೇಷ್ಠ ಆಟಗಾರ ಪ್ರಶಸ್ತಿಗೆ ಭಾಜನರಾದರು.

ADVERTISEMENT

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಆತಿಥೇಯ ಭಾರತ ತಂಡದ ವಿರುದ್ಧ 6 ವಿಕೆಟ್‌ ಅಂತರದ ಜಯ ಸಾಧಿಸಿದ ಆಸ್ಟ್ರೇಲಿಯಾ ಚಾಂಪಿಯನ್‌ ಆಗಿ ಹೊರಹೊಮ್ಮಿತು.

ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಟೀಂ ಇಂಡಿಯಾ, ನಿಗದಿತ 50 ಓವರ್‌ಗಳಲ್ಲಿ 240 ರನ್‌ ಗಳಿಸಿ ಆಲೌಟ್‌ ಆಯಿತು. ಈ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಟ್ರಾವಿಸ್‌ ಹೆಡ್ ಶತಕ (137 ರನ್‌) ಮತ್ತು ಮಾರ್ನಸ್‌ ಲಾಬುಷೇನ್‌ ಅರ್ಧಶತಕದ (ಅಜೇಯ 58 ರನ್) ಬಲದಿಂದ ಇನ್ನೂ 7 ಓವರ್‌ಗಳು ಬಾಕಿ ಇರುವಂತೆಯೇ 4 ವಿಕೆಟ್‌ ಕಳೆದುಕೊಂಡು 241 ರನ್‌ ಗಳಿಸಿತು.

ಟ್ರಾವಿಸ್‌ ಹೆಡ್‌ ಫೈನಲ್‌ ಪಂದ್ಯದ ಶ್ರೇಷ್ಠ ಆಟಗಾರ ಎನಿಸಿದರು. ಟೂರ್ನಿಯುದ್ದಕ್ಕೂ ರನ್‌ ಹೊಳೆ ಹರಿಸಿದ ಕೊಹ್ಲಿ, ಈ ವಿಶ್ವಕಪ್‌ನ ಶ್ರೇಷ್ಠ ಆಟಗಾರ ಪ್ರಶಸ್ತಿ ಮುಡಿಗೇರಿಸಿಕೊಂಡರು. 11 ಪಂದ್ಯಗಳಲ್ಲಿ ಬ್ಯಾಟ್‌ ಬೀಸಿದ ಕೊಹ್ಲಿ 3 ಶತಕ, 6 ಅರ್ಧಶತಕ ಸಹಿತ 765 ರನ್‌ ಗಳಿಸಿದ್ದಾರೆ.

ವಿರಾಟ್‌ ಕೊಹ್ಲಿಗೆ ಭಾರತದವರೇ ಆದ ಮೊಹಮ್ಮದ್‌ ಶಮಿ, ಜಸ್‌ಪ್ರಿತ್‌ ಬೂಮ್ರಾ, ರೋಹಿತ್‌ ಶರ್ಮಾ, ಆಸ್ಟ್ರೇಲಿಯಾದ ಆ್ಯಡಂ ಜಂಪಾ, ಗ್ಲೆನ್‌ ಮ್ಯಾಕ್ಸ್‌ವೆಲ್‌, ದಕ್ಷಿಣ ಆಫ್ರಿಕಾದ ಕ್ವಿಂಟನ್‌ ಡಿ ಕಾಕ್, ನ್ಯೂಜಿಲೆಂಡ್‌ನ ರಚಿನ್‌ ರವಿಂದ್ರ ಮತ್ತು ಡೆರಿಲ್‌ ಮಿಚೆಲ್ ಪೈಪೋಟಿಯೊಡ್ಡಿದ್ದರು.

1992ರಿಂದ ಇಲ್ಲಿಯವರೆಗೆ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದವರು
1992ರಲ್ಲಿ ನ್ಯೂಜಿಲೆಂಡ್‌ನ ಮಾರ್ಟಿನ್‌ ಕ್ರೋವ್: 456 ರನ್‌
1996ರಲ್ಲಿ ಶ್ರೀಲಂಕಾದ ಸನತ್‌ ಜಯಸೂರ್ಯ: 221 ರನ್‌ ಹಾಗೂ 6 ವಿಕೆಟ್‌
1999ರಲ್ಲಿ ದಕ್ಷಿಣ ಆಫ್ರಿಕಾದ ಲ್ಯಾನ್ಸ್‌ ಕ್ಲೂಸ್ನೆರ್‌: 281 ರನ್‌ ಹಾಗೂ 17 ವಿಕೆಟ್‌
2003ರಲ್ಲಿ ಭಾರತದ ಸಚಿನ್‌ ತೆಂಡೂಲ್ಕರ್‌: 673 ರನ್‌ ಹಾಗೂ 2 ವಿಕೆಟ್‌
2007ರಲ್ಲಿ ಆಸ್ಟ್ರೇಲಿಯಾದ ಗ್ಲೆನ್‌ ಮೆಗ್ರಾ: 26 ವಿಕೆಟ್‌
2011ರಲ್ಲಿ ಭಾರತದ ಯುವರಾಜ್‌ ಸಿಂಗ್‌: 362 ರನ್‌ ಹಾಗೂ 15 ವಿಕೆಟ್‌
2015ರಲ್ಲಿ ಆಸ್ಟ್ರೇಲಿಯಾದ ಮಿಚೇಲ್‌ ಸ್ಟಾರ್ಕ್‌: 22 ವಿಕೆಟ್‌
2019ರಲ್ಲಿ ನ್ಯೂಜಿಲೆಂಡ್‌ನ ಕೇನ್‌ ವಿಲಿಯಮ್ಸನ್‌: 578 ರನ್‌ ಹಾಗೂ 2 ವಿಕೆಟ್‌
2023ರಲ್ಲಿ ಭಾರತದ ವಿರಾಟ್ ಕೊಹ್ಲಿ: 765 ರನ್‌ ಹಾಗೂ 1 ವಿಕೆಟ್‌

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.