
ಅಹಮದಾಬಾದ್: ಸೂಪರ್ 8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ 3 ವಿಕೆಟ್ ಪಡೆಯುವ ಮೂಲಕ, ಅನುಭವಿ ಬೌಲರ್ ಜಸ್‌ಪ್ರೀತ್ ಬೂಮ್ರಾ ಅವರು ಚುಟುಕು ವಿಶ್ವಕಪ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನ್ನುವ ದಾಖಲೆಗೆ ಪಾತ್ರರಾದರು.
ದಕ್ಷಿಣ ಆಫ್ರಿಕಾ ವಿರುದ್ದ ಅವರು 4 ಓವರ್‌ಗಳಲ್ಲಿ 15 ರನ್ ನೀಡಿ ಪ್ರಮುಖ 3 ವಿಕೆಟ್ ಕಬಳಿಸಿದರು. ಈ ಮೂಲಕ ಚುಟುಕು ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಬಾರಿ (5 ಸಲ) 15 ಅಥವಾ ಅದಕ್ಕಿಂತ ಕಡಿಮೆ ರನ್ ನೀಡಿದ ಬೌಲರ್ ಎನ್ನುವ ಖ್ಯಾತಿಗೆ ಪಾತ್ರರಾದರು.
ಭಾರತದ ಪರ ಅತಿ ಹೆಚ್ಚು ವಿಕೆಟ್: ಚುಟುಕು ವಿಶ್ವಕಪ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ರವಿಚಂದ್ರನ್ ಅಶ್ವಿನ್(32 ವಿಕೆಟ್) ಅವರ ದಾಖಲೆಯನ್ನು ಬೂಮ್ರಾ ಮುರಿದರು. ಅವರು ಒಟ್ಟು 33 ವಿಕೆಟ್ ಪಡೆದಿದ್ದಾರೆ.
ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಅರ್ಷದೀಪ್ ಸಿಂಗ್ 32 ವಿಕೆಟ್ ಪಡೆದಿದ್ದರೆ, 29 ವಿಕೆಟ್ ಕಬಳಿಸಿರುವ ಹಾರ್ದಿಕ್ ಪಾಂಡ್ಯ 4ನೇ ಸ್ಥಾನದಲ್ಲಿದ್ದಾರೆ.
ಟಿ–20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಬೌಲ್ಡ್ ಮಾಡಿದ ಮಾಲಿಂಗ(43 ವಿಕೆಟ್) ಅವರ ದಾಖಲೆಯನ್ನು ಕೂಡ ಬೂಮ್ರಾ(44 ವಿಕೆಟ್) ಮುರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.