ADVERTISEMENT

T20 World Cup:ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕಿವೀಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಫೆಬ್ರುವರಿ 2026, 13:24 IST
Last Updated 27 ಫೆಬ್ರುವರಿ 2026, 13:24 IST
   

ಕೊಲಂಬೊ: ಟಿ20 ವಿಶ್ವಕಪ್‌ನ ಸೂಪರ್‌ 8 ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್‌ ತಂಡದ ವಿರುದ್ಧ ಟಾಸ್‌ ಗೆದ್ದಿರುವ ನ್ಯೂಜಿಲೆಂಡ್ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಪಂದ್ಯ ಜರುಗುತ್ತಿದೆ.

ಸೂಪರ್‌ 8 ಹಂತದಲ್ಲಿ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಇಂಗ್ಲೆಂಡ್‌ ತಂಡವು ಈಗಾಗಲೇ ಸೆಮಿಫೈನಲ್ ತಲುಪಿದೆ.

ADVERTISEMENT

ಮತ್ತೊಂದೆಡೆ ನ್ಯೂಜಿಲೆಂಡ್ ತಂಡದ ಮೊದಲ ಪಂದ್ಯವು ಮಳೆಗಾಹುತಿಯಾಗಿತ್ತು. ಎರಡನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಿದ್ದ ಕಿವೀಸ್, 3 ಅಂಕಗಳೊಂದಿಗೆ ಬಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಸೆಮಿಫೈನಲ್ ತಲುಪುವ ಗುರಿಯಲ್ಲಿದೆ.

ನ್ಯೂಜಿಲೆಂಡ್ ಈ ಪಂದ್ಯವನ್ನು ಗೆದ್ದರೆ, ಪಾಕಿಸ್ತಾನ ತಂಡವು ಟೂರ್ನಿಯಿಂದ ಹೊರಬೀಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.