
ಪಲ್ಲೆಕೆಲೆ: ಟಿ–20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಪಾಕಿಸ್ತಾನದ ಆರಂಭಿಕ ಬ್ಯಾಟರ್‌ಗಳು ಅಬ್ಬರಿಸಿದ್ದಾರೆ.
ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡವು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತು. ಶ್ರೀಲಂಕಾ ತಂಡದ ಗೆಲ್ಲಲು 213 ರನ್ ಗುರಿ ನೀಡಿದೆ.
ಪಾಕ್ ಪರ ಆರಂಭಿಕ ಆಟಗಾರ ಸಾಹಿಬ್‌ಜಾದಾ ಫರ್ಹಾನ್(100 ರನ್: 60 ಎಸೆತ) ಶತಕ ಬಾರಿಸಿದರೆ, ಇನ್ನೊಬ್ಬ ಆರಂಭಿಕ ಬ್ಯಾಟರ್ ಫಖರ್ ಜಮಾನ್ (84 ರನ್: 42 ಎಸೆತ) ಅರ್ಧಶತಕ ಸಿಡಿಸಿದರು. ಮೊದಲ ವಿಕೆಟ್‌ಗೆ 15.5 ಓವರ್‌ಗಳಲ್ಲಿ 176 ರನ್ ಗಳಿಸಿದರು.
ಈ ವಿಶ್ವಕಪ್‌ನಲ್ಲಿ ಸಾಹಿಬ್‌ಜಾದಾ ಫರ್ಹಾನ್ ಬಾರಿಸಿದ ಎರಡನೇ ಶತಕ ಇದಾಗಿದೆ.
ಆರಂಭಿಕ ಆಟಗಾರರನ್ನು ಹೊರತುಪಡಿಸಿ, ಉಳಿದ ಬ್ಯಾಟರ್‌ಗಳು ರನ್ ಗಳಿಸಲು ಪರದಾಡಿದರು. ಡೆತ್ ಓವರ್‌ನಲ್ಲಿ ಲಂಕಾದ ಬೌಲರ್‌ಗಳು ಮೇಲುಗೈ ಸಾಧಿಸಿದರು.
ಲಂಕಾ ಪರ ದಿಲ್ಶನ್ ಮಧುಶಂಕ 3 ವಿಕೆಟ್ ಪಡೆದರೆ, ನಾಯಕ ದಾಸುನ್ ಶನಕ 2 ವಿಕೆಟ್ ಕಿತ್ತರು.
ಪಾಕಿಸ್ತಾನ ತಂಡವು ಸೆಮಿಫೈನಲ್ ಪ್ರವೇಶಿಸಬೇಕಾದರೆ, ಲಂಕಾ ತಂಡವನ್ನು 147 ರನ್ ಅಥವಾ ಅದಕ್ಕಿಂತ ಕಡಿಮೆ ರನ್‌ಗಳೊಳಗೆ ಕಟ್ಟಿಹಾಕಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.