ADVERTISEMENT

BitChat: ಇಂಟರ್‌ನೆಟ್, ವೈಫೈ ಇರದೆ ಬಳಸುವ ಹೊಸ ಮೆಸೆಂಜರ್ App ತಂದ ಜಾಕ್ ಡೋರ್ಸಿ

Jack Dorsey BitChat app: ಜನಪ್ರಿಯ ಸಾಮಾಜಿಕ ಜಾಲತಾಣ ಟ್ವಿಟರ್‌ನ (ಇಂದಿನ ಎಕ್ಸ್‌) ಸಹ ಸ್ಥಾಪಕ ಜಾಕ್ ಡೋರ್ಸಿ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದಾರೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಜುಲೈ 2025, 11:46 IST
Last Updated 8 ಜುಲೈ 2025, 11:46 IST
<div class="paragraphs"><p>ಜಾಕ್ ಡೋರ್ಸಿ,&nbsp;BitChat</p></div>

ಜಾಕ್ ಡೋರ್ಸಿ, BitChat

   

ಬೆಂಗಳೂರು: ಜನಪ್ರಿಯ ಸಾಮಾಜಿಕ ಜಾಲತಾಣ ಟ್ವಿಟರ್‌ನ (ಇಂದಿನ ಎಕ್ಸ್‌) ಸಹ ಸ್ಥಾಪಕ ಜಾಕ್ ಡೋರ್ಸಿ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಅದೂ ಕ್ರಾಂತಿಕಾರಿ ಎನ್ನಬಹುದಾದ ಹೆಜ್ಜೆಯೊಂದಿಗೆ.

ಇಂಟರ್‌ನೆಟ್ ಇಲ್ಲದೇ, ಸೆಟ್‌ಲೈಟ್ ಸಂಪರ್ಕ ಇಲ್ಲದೇ, ವೈಫೈನೂ ಇಲ್ಲದೇ ಕಾರ್ಯನಿರ್ವಹಿಸಬಹುದಾದ ಹೊಸ ಮೆಸೆಂಜರ್ ಆ್ಯಪ್ ಒಂದನ್ನು ಡೋರ್ಸಿ ಅವರು ಅಭಿವೃದ್ಧಿಪಡಿಸಿರುವುದಾಗಿ ವರದಿಯಾಗಿದೆ.

ADVERTISEMENT

ಬಿಟ್ ಚಾಟ್ (BitChat) ಎಂಬ ಪಿ2ಪಿ ಮೆಸೆಂಜರ್‌ ಆ್ಯಪ್‌ ಅನ್ನು ಜಾಕ್ ಡೊರ್ಸಿ ಬಿಡುಗಡೆ ಮಾಡಿದ್ದಾರೆ. ಸದ್ಯ ಈ ಆ್ಯಪ್ ಆ್ಯಪಲ್ ಐ ಸ್ಟೋರ್‌ನಲ್ಲಿ ಟೆಸ್ಟ್‌ ಮೋಡ್‌ನಲ್ಲಿ ಮಾತ್ರ ಲಭ್ಯವಿದೆ.

ಬಿಟ್ ಚಾಟ್‌ ಟೆಸ್ಟ್‌ ಮೋಡ್‌ನಲ್ಲಿ ಹಲವರು ಚಾಟ್ ಮಾಡಿರುವ ಸ್ಕ್ರೀನ್ ಶಾಟ್‌ಗಳು ಆನ್‌ಲೈನ್‌ಲ್ಲಿ ಗಮನ ಸೆಳೆದಿವೆ. ಕ್ರಿಪ್ಟೊ ಕರೆನ್ಸಿ ಆ್ಯಪ್‌ಗಳಲ್ಲಿ ಬಳಕೆಯಾಗುತ್ತಿದ್ದ ತಂತ್ರಜ್ಞಾನವ್ನೇ ಸುಧಾರಿಸಿ ಈ ಹೊಸ ಆ್ಯಪ್ ತರಲಾಗಿದೆ ಎನ್ನಲಾಗಿದೆ.

ಮೊಬೈಲ್‌, ಇತರ ಡಿವೈಸ್‌ಗಳಲ್ಲಿನ ಬ್ಲೂಟೂತ್‌ ಮೂಲಕವೇ ಒಂದು ಸಾಧನದಿಂದ ಇನ್ನೊಂದು ಸಾಧನವನ್ನು ಪಿ2ಪಿ ನೆಟ್‌ವರ್ಕ್ ಮೂಲಕ ಇದು ಸಂಪರ್ಕ ಸಾಧಿಸುತ್ತದೆ ಎನ್ನಲಾಗಿದೆ.

2022 ರಲ್ಲಿ ಇಲಾನ್ ಮಸ್ಕ್ ಟ್ವಿಟರ್‌ ಅನ್ನು ಖರೀದಿಸಿದ ನಂತರ ಜಾಕ್ ಅಲ್ಲಿಂದ ಹೊರ ಬಿದ್ದಿದ್ದರು. ಅವರು ಈಗ ಅಭಿವೃದ್ಧಿಪಡಿಸಿರುವ ಬಿಟ್ ಚಾಟ್ ಯಶಸ್ವಿಯಾದರೇ ತಂತ್ರಜ್ಞಾನ ಲೋಕದಲ್ಲಿ ಹೊಸ ಕ್ರಾಂತಿಯಾಗಲಿದೆ ಎನ್ನಲಾಗಿದೆ.

ಇಂಟರ್‌ನೆಟ್ ಇಲ್ಲದೇ, ಸೆಟ್‌ಲೈಟ್ ಸಂಪರ್ಕ ಇಲ್ಲದೇ, ವೈಫೈನೂ ಇಲ್ಲದೇ ಬಿಟ್ ಚಾಟ್ ಮೂಲಕ ಸುಲಭ ಸಂವಹನ ಸಾಧಿಸಬಹುದು ಎಂದು ಹೇಳಲಾಗಿದೆ. ಈ ಕುರಿತು ಹಲವು ಟೆಕ್ ಮಾಧ್ಯಮಗಳು ವರದಿ ಮಾಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.