ಬೆಂಗಳೂರು: ಆಲ್ಫಾಬೆಟ್ ಇಂಕ್ ಒಡೆತನದ ಗೂಗಲ್ ಕಂಪನಿಯು ತನ್ನ ಆಂಡ್ರಾಯ್ಡ್, ಫಿಕ್ಸೆಲ್ ಫೋನ್ಸ್ ಮತ್ತು ಕ್ರೋಮ್ ಬ್ರೌಸರ್ ಘಟಕಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೂರಾರು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ.
ಈ ಘಟಕಗಳಲ್ಲಿ ಕೆಲಸ ನಿರ್ವಹಿಸುವ ಉದ್ಯೋಗಿಗಳನ್ನು ಒಂದೇ ವೇದಿಕೆಯಡಿ ಸಂಯೋಜಿಸಲು ಕ್ರಮವಹಿಸಲಾಗಿದೆ. ಕಾರ್ಯಾಚರಣೆಗೆ ಮತ್ತಷ್ಟು ವೇಗ ನೀಡುವುದು ಇದರ ಉದ್ದೇಶ. ಹಾಗಾಗಿ, ಜನವರಿಯಲ್ಲಿ ಉದ್ಯೋಗಿಗಳ ವಜಾಕ್ಕೆ ನಿರ್ಧರಿಸಲಾಗಿತ್ತು. ಸ್ವಯಂಪ್ರೇರಿತವಾಗಿ ಉದ್ಯೋಗ ತೊರೆಯುವಂತೆ ಸೂಚಿಸಲಾಗಿತ್ತು ಎಂದು ಗೂಗಲ್ ಕಂಪನಿಯ ವಕ್ತಾರರು ತಿಳಿಸಿದ್ದಾರೆ.
ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನ ಕಂಪನಿಗಳು ಡೇಟಾ ಸೆಂಟರ್ ಮತ್ತು ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಅಭಿವೃದ್ಧಿಗೆ ಬಂಡವಾಳ ಹೂಡುತ್ತಿವೆ. ಹಾಗಾಗಿ, ಇತರೆ ವಲಯಗಳಲ್ಲಿನ ಹೂಡಿಕೆ ಪ್ರಮಾಣವನ್ನು ತಗ್ಗಿಸುತ್ತಿವೆ. ಇದರಿಂದ ಉದ್ಯೋಗ ಕಡಿತಕ್ಕೆ ಮುಂದಾಗಿವೆ ಎಂದು ತಜ್ಞರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.