ADVERTISEMENT

Nokia C31 | ದೇಶದ ಮಾರುಕಟ್ಟೆಗೆ ನೋಕಿಯಾ ಹೊಸ ಸ್ಮಾರ್ಟ್‌ಫೋನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಡಿಸೆಂಬರ್ 2022, 11:50 IST
Last Updated 15 ಡಿಸೆಂಬರ್ 2022, 11:50 IST
ನೋಕಿಯಾ C31
ನೋಕಿಯಾ C31   

ಬೆಂಗಳೂರು: ಎಚ್‌ಎಂಡಿ ಗ್ಲೋಬಲ್ ಒಡೆತನದ ನೋಕಿಯಾ, ದೇಶದ ಗ್ಯಾಜೆಟ್ ಮಾರುಕಟ್ಟೆಗೆ ನೂತನ ಸ್ಮಾರ್ಟ್‌ಫೋನ್ ಪರಿಚಯಿಸಿದೆ.

ನೋಕಿಯಾ ‘ಸಿ’ ಸ್ಮಾರ್ಟ್‌ಫೋನ್ ಸರಣಿಯಲ್ಲಿ ಹೊಸದಾಗಿ ನೋಕಿಯಾ C31 ಬಿಡುಗಡೆಯಾಗಿದೆ.

ಹೊಸ ನೋಕಿಯಾ Nokia C31
ನೋಕಿಯಾ ನೂತನ ಸ್ಮಾರ್ಟ್‌ಫೋನ್ 6.7 ಇಂಚಿನ ಎಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 3GB RAM ಮತ್ತು 32GB ಹಾಗೂ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಇದರಲ್ಲಿದೆ. ಜತೆಗೆ ಒಂದು ಬಾರಿ ಚಾರ್ಜಿಂಗ್ ಮಾಡಿದರೆ 3 ದಿನದವರೆಗೂ ಬ್ಯಾಟರಿಬಾಳಿಕೆ ಬರುತ್ತದೆ.

ADVERTISEMENT

ಈ ಸ್ಮಾರ್ಟ್‌ಫೋನ್‌ ಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ ಎಂದು ಕಂಪನಿ ತಿಳಿಸಿದೆ.

ಬೆಲೆ ಮತ್ತು ಲಭ್ಯತೆ
ಡಿ.15ರಿಂದ Charcoal, Mint ಹಾಗೂ Cyan ಬಣ್ಣದಲ್ಲಿ ಹೊಸ ನೋಕಿಯಾ ಸ್ಮಾರ್ಟ್‌ಫೋನ್ ದೊರೆಯಲಿದ್ದು, 3GB RAM ಮತ್ತು 32GB ಸ್ಮಾರ್ಟ್‌ಫೋನ್‌ಗೆ ₹9,999 ಹಾಗೂ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಸ್ಮಾರ್ಟ್‌ಫೋನ್‌ಗೆ ₹10,999 ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.