ನವದೆಹಲಿ: ಫ್ಲಿಪ್ಕಾರ್ಟ್ನ ಬಿಗ್ ಬಿಲಿಯನ್ ಡೇಸ್ನಲ್ಲಿ ಅತಿ ಹೆಚ್ಚು ಮಾರಾಟ ಕಂಡಿರುವ ಸ್ಮಾರ್ಟ್ಫೋನ್ಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿರುವುದಾಗಿ ರಿಯಲ್ಮಿ ಕಂಪನಿ ಹೇಳಿಕೊಂಡಿದೆ.
ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 4ರವರೆಗೆ ಒಟ್ಟಾರೆ 22 ಲಕ್ಷ ಮೊಬೈಲ್ಗಳನ್ನು ಮಾರಾಟ ಮಾಡಿದೆ. ಈ ಮೂಲಕ ಅತಿ ಹೆಚ್ಚಿನ ಸ್ಮಾರ್ಟ್ಫೋನ್ ಮಾರಾಟ ಮಾಡಿರುವ ಬ್ರ್ಯಾಂಡ್ ಆಗಿದೆ ಎಂದು ರಿಯಲ್ಮಿ ತಿಳಿಸಿದೆ.
ವಿವಿಧ ರೀತಿಯ ರಿಯಾಯ್ತಿ ಕೊಡುಗೆಗಳಲ್ಲದೆ, ಕಡಿಮೆ ಬೆಲೆಗೆರಿಯಲ್ಮಿ ಸಿ2, ರಿಯಲ್ಮಿ 5 ಮತ್ತು ರಿಯಲ್ಮಿ 3 ಪ್ರೊ ಸ್ಮಾರ್ಟ್ಫೋನ್ಗಳನ್ನು ಖರೀದಿಗೆ ಅವಕಾಶ ನೀಡಲಾಗಿತ್ತು ಎಂದು ತಿಳಿಸಿದೆ.
ಅತಿ ಕಡಿಮೆ ಸಮಯದಲ್ಲಿ ಈ ಸಾಧನೆ ಮಾಡಲಾಗಿದೆ. ಗುಣಮಟ್ಟ ಮತ್ತು ಬೆಲೆಯ ದೃಷ್ಟಿಯಿಂದ ಗ್ರಾಹಕರ ಆದ್ಯತೆಯ ಮೊಬೈಲ್ ಫೋನ್ ಬ್ರ್ಯಾಂಡ್ ಆಗಿ ಹೊರಹೊಮ್ಮಿದೆ’ ಎಂದು ರಿಯಲ್ಮಿ ಇಂಡಿಯಾದ ಸಿಇಒ ಮಾಧವ್ ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.