ADVERTISEMENT

ಬಜೆಟ್ ಸರಣಿ ಗ್ಯಾಲಕ್ಸಿ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ ಸರಣಿಯಲ್ಲಿ ಹೊಸ ಮಾದರಿಗಳು ಮಾರುಕಟ್ಟೆಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಡಿಸೆಂಬರ್ 2022, 11:04 IST
Last Updated 19 ಡಿಸೆಂಬರ್ 2022, 11:04 IST
   

ಬೆಂಗಳೂರು: ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ ಸರಣಿಯಲ್ಲಿ ಹೊಸ ಮಾದರಿಗಳು ಮಾರುಕಟ್ಟೆಗೆ ಲಗ್ಗೆ ಇರಿಸಿವೆ.

A04 ಮತ್ತು A04e ಎಂಬ ಎರಡು ಮಾದರಿಗಳನ್ನು ಸ್ಯಾಮ್‌ಸಂಗ್ ಭಾರತದಲ್ಲಿ ಬಿಡುಗಡೆ ಮಾಡಿದೆ.

ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್‌ನಲ್ಲಿ 6.5 ಇಂಚಿನ ಎಚ್‌ಡಿ+ ಡಿಸ್‌ಪ್ಲೇ, ಮೀಡಿಯಾಟೆಕ್ ಹೆಲಿಯೊ P35 12nm ಒಕ್ಟಾ ಕೋರ್ ಪ್ರೊಸೆಸರ್ ಮತ್ತು IMG PowerVR GE8320 ಗ್ರಾಫಿಕ್ಸ್ ಬೆಂಬಲ ಹೊಂದಿದೆ. ಅಲ್ಲದೆ, 3GB/4GB RAM ಮತ್ತು 32GB / 128GB ಸ್ಟೋರೇಜ್ ಆಯ್ಕೆಗಳು ಕೂಡ ದೊರೆಯಲಿದೆ.

ADVERTISEMENT

ಹಿಂಭಾಗದಲ್ಲಿ 13 ಮೆಗಾಪಿಕ್ಸೆಲ್ ಕ್ಯಾಮೆರಾ ಹಾಗೂ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ, 5,000mAh ಬ್ಯಾಟರಿ ಇದೆ ಎಂದು ಕಂಪನಿ ಹೇಳಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A04
ನೂತನ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ನಲ್ಲಿ 6.5 ಇಂಚಿನ ಎಚ್‌ಡಿ ಡಿಸ್‌ಪ್ಲೇ, ಮೀಡಿಯಾಟೆಕ್ ಹೆಲಿಯೊ P35 12nm ಒಕ್ಟಾ ಕೋರ್ ಪ್ರೊಸೆಸರ್ ಇದೆ.

ಅಲ್ಲದೆ, IMG PowerVR GE8320 ಗ್ರಾಫಿಕ್ಸ್ ಬೆಂಬಲ ಹೊಂದಿದೆ. 4GB RAM ಮತ್ತು 64GB / 128GB ಸ್ಟೋರೇಜ್ ಬೆಂಬಲ ಇದ್ದು, ಹಿಂಭಾಗದಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಸೆನ್ಸರ್ ಜತೆಗೆ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ, 5,000mAh ಬ್ಯಾಟರಿ ಬೆಂಬಲ ಹೊಂದಿದೆ ಎಂದು ಸ್ಯಾಮ್‌ಸಂಗ್ ತಿಳಿಸಿದೆ.

ಬೆಲೆ ವಿವರ
ಸ್ಯಾಮ್‌ಸಂಗ್ ಗ್ಯಾಲಕ್ಸಿ A04e

ತಿಳಿ ನೀಲಿ ಮತ್ತು ತಾಮ್ರದ ಬಣ್ಣದಲ್ಲಿ ಲಭ್ಯ
3GB RAM + 32GB ಮಾದರಿಗೆ ₹9,299
3GB RAM + 64GB ಆವೃತ್ತಿಗೆ ₹9,999 ಮತ್ತು
4GB RAM 128GB ಮಾದರಿಗೆ ₹11,499 ದರವಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A04
ಕಪ್ಪು, ತಾಮ್ರ ಮತ್ತು ಹಸಿರು ಬಣ್ಣದಲ್ಲಿ ಲಭ್ಯ
4GB RAM ಹಾಗೂ 64GB ಮತ್ತು 128GB ಸ್ಟೋರೇಜ್ ಆವೃತ್ತಿಯಲ್ಲಿ ನೂತನ ಮಾದರಿಗಳು ಲಭ್ಯವಿದ್ದು, ಬೆಲೆ ಕ್ರಮವಾಗಿ ₹11,999 ಹಾಗೂ ₹12,999 ಇರಲಿದೆ. ಜತೆಗೆ ₹999 ದರದಿಂದ EMI ಸೌಲಭ್ಯವೂ ಲಭ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.