ಸ್ಪೇಡೆಕ್ಸ್ ಯೋಜನೆ, ಅಮಿತ್ ಶಾ
(ಪಿಟಿಐ ಚಿತ್ರಗಳು)
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಹತ್ತರ ಸ್ಪೇಡೆಕ್ಸ್ ಯಶಸ್ವಿ ಯೋಜನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದಾರೆ.
ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅಮಿತ್ ಶಾ, 'ಭಾರತ 'ಡಾಕಿಂಗ್' ತಂತ್ರಜ್ಞಾನ ಹೊಂದಿದ ನಾಲ್ಕನೇ ದೇಶವಾಗಿದೆ' ಎಂದು ಹೇಳಿದ್ದಾರೆ.
'ಇಸ್ರೊದ ತಂಡಕ್ಕೆ ಅಭಿನಂದನೆಗಳು. ಬಾಹ್ಯಾಕಾಶ ಡಾಕಿಂಗ್ ತಂತ್ರಜ್ಞಾನದಲ್ಲಿ ಭಾರತಕ್ಕೆ ಹೊಸ ಹಾದಿ ತೆರೆದುಕೊಂಡಿದೆ. ಅಲ್ಲದೆ ಬಾಹ್ಯಾಕಾಶ ಕ್ಷೇತ್ರದಲ್ಲಿ ಜಾಗತಿಕ ನಾಯಕನಾಗಿ ಭಾರತ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸಿದೆ' ಎಂದು ಹೇಳಿದ್ದಾರೆ.
'ಇದೊಂದು ಮಹತ್ತರ ಯಶಸ್ಸು ಆಗಿದ್ದು, ಮುಂದಿನ ಪಯಣಕ್ಕೆ ಶುಭಹಾರೈಕೆಗಳು' ಎಂದು ಬರೆದುಕೊಂಡಿದ್ದಾರೆ.
ಬಾಹ್ಯಾಕಾಶದಲ್ಲಿ ಎರಡು ಉಪಗ್ರಹಗಳನ್ನು ಜೋಡಿಸುವಂಥ (ಡಾಕಿಂಗ್) ಸ್ಪೇಡೆಕ್ಸ್ ಯೋಜನೆಗಾಗಿ ಎರಡು ಉಪಗ್ರಹಗಳನ್ನು ಹೊತ್ತ ಪಿಎಸ್‌ಎಲ್‌ವಿ ರಾಕೆಟ್ ಅನ್ನು ಸೋಮವಾರ ರಾತ್ರಿ 10 ಗಂಟೆಗೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿದೆ. ಬಳಿಕ ಇದು ನಿಗದಿತ ಕಕ್ಷೆಗೆ ಸೇರಿತು ಎಂದು ಇಸ್ರೊ ಘೋಷಿಸಿದೆ.
ಅಮೆರಿಕ, ರಷ್ಯಾ ಮತ್ತು ಚೀನಾ ಬಳಿಕ ಭಾರತ, ಬಾಹ್ಯಾಕಾಶ ನೌಕೆಗಳ 'ಡಾಕಿಂಗ್' ತಂತ್ರಜ್ಞಾನ ಹೊಂದಿದ ದೇಶವೆನಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.