ಇಸ್ರೊ ಗಗನಯಾನ: ಏರ್ ಡ್ರಾಪ್ ಟೆಸ್ಟ್
(ಚಿತ್ರ ಕೃಪೆ: X/@isro)
ಶ್ರೀಹರಿಕೋಟ: ಮಹತ್ವಾಕಾಂಕ್ಷಿ ಗಗನಯಾನ ಯೋಜನೆಯ ಪ್ಯಾರಾಚೂಟ್ ವ್ಯವಸ್ಥೆಯ ಮೊದಲ ಇಂಟೆಗ್ರೇಟೆಡ್ ಏರ್ ಡ್ರಾಪ್ ಟೆಸ್ಟ್ (IADT-01) ಅನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ (ಇಸ್ರೊ) ತಿಳಿಸಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿ ಈ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು.
ಇಸ್ರೊ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ), ಭಾರತೀಯ ವಾಯುಪಡೆ, ಭಾರತೀಯ ನೌಕಾಪಡೆ ಮತ್ತು ಭಾರತೀಯ ಕೋಸ್ಟ್ ಗಾರ್ಡ್ ಜಂಟಿ ನೇತೃತ್ವದಲ್ಲಿ ಪರೀಕ್ಷೆ ಹಮ್ಮಿಕೊಳ್ಳಲಾಯಿತು.
ಪ್ಯಾರಾಚೂಟ್ ಆಧಾರಿತ ವಿಧಾನವು ಸುರಕ್ಷಿತವಾಗಿ ಹಿಂದಿರುವಾಗ ಹಾಗೂ ಲ್ಯಾಂಡಿಂಗ್ ಸಂದರ್ಭದಲ್ಲಿ ಅತ್ಯಂತ ನಿರ್ಣಾಯಕ ಅಂಶವೆನಿಸಿದೆ.
2027ರ ವೇಳೆಗೆ ಗಗನಯಾನ ಕಾರ್ಯಕ್ರಮದ ಮೂಲಕ ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸಿ ಸುರಕ್ಷಿತವಾಗಿ ಮರಳಿ ತರುವ ಗುರಿ ಹೊಂದಲಾಗಿದೆ. ಇದರಂತೆ ನಿರಂತರ ಸಿದ್ಧತೆ ನಡೆಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.