ವಿ. ನಾರಾಯಣನ್
(ಪಿಟಿಐ ಚಿತ್ರ)
ತಿರುವನಂತಪುರ: ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಸಾಧನೆಯು ಜಾಗತಿಕ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಅಧ್ಯಕ್ಷ ಡಾ. ವಿ. ನಾರಾಯಣನ್ ಇಂದು (ಶುಕ್ರವಾರ) ತಿಳಿಸಿದ್ದಾರೆ.
ತಿರುವನಂತಪುರದ ಸಿಎಸ್‌ಐಆರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಳೆದ ಐದು ದಶಕಗಳಲ್ಲಿ ಬಾಹ್ಯಾಕಾಶ, ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂದು ಉಲ್ಲೇಖಿಸಿದ್ದಾರೆ.
ದೇಶದ ಬಾಹ್ಯಾಕಾಶ ತಂತ್ರಜ್ಞಾನ ಎಷ್ಟರ ಮಟ್ಟಿಗೆ ಬೆಳೆದಿದೆ ಎಂದರೆ ಪ್ರಮುಖ ಜಾಗತಿಕ ಶಕ್ತಿಗಳು ಮೆಚ್ಚುಗೆಯಿಂದ ನೋಡುತ್ತಿದೆ ಎಂದು ಅವರು ಹೇಳಿದ್ದಾರೆ.
ಇದೀಗಷ್ಟೇ ಭೂಮಿ ಸಮೀಕ್ಷೆಯ ಉದ್ದೇಶದೊಂದಿಗೆ ಇಸ್ರೊ ಹಾಗೂ ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿ ಸಿರುವ ಸಿಂಥೆಟಿಕ್ ಅಪರ್ಚರ್ ರೇಡಾರ್ 'ನಿಸಾರ್' ಉಪಗ್ರಹವನ್ನು ಉಡ್ಡಯನ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.