ADVERTISEMENT

NASA Axiom-4 Mission Launch LIVE: ಕ್ಷಣಗಣನೆ ಆರಂಭ, ನೇರ ಪ್ರಸಾರ ಇಲ್ಲಿ ನೋಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಜೂನ್ 2025, 6:02 IST
Last Updated 25 ಜೂನ್ 2025, 6:02 IST
<div class="paragraphs"><p>ಶುಭಾಂಶು ಶುಕ್ಲಾ</p></div>

ಶುಭಾಂಶು ಶುಕ್ಲಾ

   

(ಚಿತ್ರ ಕೃಪೆ: X/@SpaceX)

ನವದೆಹಲಿ: 'ಆ್ಯಕ್ಸಿಯಂ–4' ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು (ಜೂನ್‌ 25) ಮಧ್ಯಾಹ್ನ 12.01ಕ್ಕೆ (ಭಾರತೀಯ ಕಾಲಮಾನ) ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್‌) ಪ್ರಯಾಣ ಬೆಳೆಸುವರು ಎಂದು ನಾಸಾ ಮಂಗಳವಾರ ಘೋಷಿಸಿದೆ.

ADVERTISEMENT

‘ಶುಭಾಂಶು ಶುಕ್ಲಾ ಅಲ್ಲದೆ, ಹಂಗರಿ ಮತ್ತು ಪೋಲೆಂಡ್‌ನ ಗಗನಯಾತ್ರಿಗಳಿರುವ ಗಗನನೌಕೆಯನ್ನು ಹೊತ್ತ ಸ್ಪೇಸ್‌ಎಕ್ಸ್‌ನ ‘ಫಾಲ್ಕನ್‌–9’ ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಭಕ್ಕೆ ಚಿಮ್ಮಲಿದೆ’ ಎಂದಿದೆ.

‘ನಾಸಾ, ಆ್ಯಕ್ಸಿಯಂ ಸ್ಪೇಸ್‌ ಹಾಗೂ ಇಲಾನ್‌ ಮಸ್ಕ್‌ ಒಡೆತನ ಸ್ಪೇಸ್‌ಎಕ್ಸ್‌ ಜಂಟಿಯಾಗಿ ಈ ಬಾಹ್ಯಾಕಾಶ ಕಾರ್ಯಕ್ರಮ ರೂಪಿಸಿವೆ. ವಿವಿಧ ಕಾರಣಗಳಿಗಾಗಿ ಒಟ್ಟು ಆರು ಬಾರಿ ಈ ಬಾಹ್ಯಾಕಾಶ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.

ಕಮಾಂಡರ್ ಪೆಗ್ಗಿ ವಿಟ್ಸನ್ ನೇತೃತ್ವದಲ್ಲಿ, ಶುಕ್ಲಾ, ಹಂಗರಿಯ ಟಿಬೊರ್ ಕಾಪು, ಪೋಲೆಂಡ್‌ನ ಸ್ಲಾವೋಜ್ ವಿಸ್‌ನೀವ್‌ಸ್ಕಿ ಕೂಡ ಐಎಸ್‌ಎಸ್‌ಗೆ ತೆರಳಲಿದ್ದಾರೆ.

ಇಲ್ಲಿ ನೋಡಿ ಲೈವ್...

'ಆ್ಯಕ್ಸಿಯಂ–4' ಅಂತರಿಕ್ಷಯಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನೇರಪ್ರಸಾರದ ಲಿಂಕ್ ಅನ್ನು ನಾಸಾ ಹಾಗೂ ಸ್ಪೇಸ್‌ಎಕ್ಸ್ ಹಂಚಿದೆ.

NASA Axiom-4 Mission Launch LIVE

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.