(ಚಿತ್ರ ಕೃಪೆ: X/@NobelPrize)
ಸ್ಟಾಕ್‌ಹೋಮ್: ಭೌತಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದ್ದು, ಜಾನ್ ಕ್ಲಾರ್ಕ್, ಮೈಕೆಲ್ ಎಚ್. ಡೆವೊರೆಟ್ ಮತ್ತು ಜಾನ್ ಎಂ. ಮಾರ್ಟಿನಿಸ್ ಎಂಬ ಮೂವರು ವಿಜ್ಞಾನಿಗಳು ಪ್ರಶಸ್ತಿಗೆ ಅರ್ಹರಾಗಿದ್ದಾರೆ.
ನೊಬೆಲ್ ಪ್ರಶಸ್ತಿಯ ಸ್ಥಾಪಕ ಆಲ್ಫ್ರೆಡ್ ನೊಬೆಲ್ ಅವರ ಪುಣ್ಯತಿಥಿಯಾದ ಡಿಸೆಂಬರ್ 10ರಂದು ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ.
ಕಳೆದ ವರ್ಷ ಜಾನ್ ಹಾಪ್‌ಫೀಲ್ಡ್ ಮತ್ತು ಜೆಫ್ರಿ ಹಿಂಟರ್ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಜಯಿಸಿದ್ದರು.
ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸಂಬಂಧಿಸಿದ ಸಂಶೋಧನೆಗಾಗಿ ವಿಜ್ಞಾನಿಗಳಾದ ಅಮೆರಿಕದ ಮೇರಿ ಈ.ಬ್ರಂಕೊ, ಫ್ರೆಡ್ ರಾಮ್ಸ್‌ಡೆಲ್ ಹಾಗೂ ಜಪಾನ್‌ನ ಶಿಮೋನ್ ಸಕಾಗುಚಿ ಅವರು 2025ನೇ ಸಾಲಿನ ವೈದ್ಯಕೀಯ ಕ್ಷೇತ್ರದ ನೊಬೆಲ್ ಪ್ರಶಸ್ತಿಗೆ ಆಯ್ಕೆಯಾಗಿದ್ದರು.
ನಾಳೆ (ಬುಧವಾರ) ರಸಾಯನಶಾಸ್ತ್ರ ಹಾಗೂ ಗುರುವಾರ ಸಾಹಿತ್ಯ ವಿಭಾಗದ ನೊಬೆಲ್ ಪ್ರಶಸ್ತಿಗಳ ಘೋಷಣೆಯಾಗಲಿದೆ. ಶುಕ್ರವಾರದಂದು ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗಲಿದೆ. ಹಾಗೆಯೇ ಅಕ್ಟೋಬರ್ 13ರಂದು ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಪ್ರಕಟವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.