ADVERTISEMENT

Video | ಬಾಹ್ಯಾಕಾಶ ನಿಲ್ದಾಣದಿಂದ ಮರಳಿದ ಶುಭಾಂಶು ಶುಕ್ಲಾ ಸಹಿತ ಗಗನಯಾನಿಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಜುಲೈ 2025, 10:21 IST
Last Updated 15 ಜುಲೈ 2025, 10:21 IST
   

ವಾಷಿಂಗ್ಟನ್‌: ವಾಣಿಜ್ಯ ಉದ್ದೇಶಿತ ಆಕ್ಸಿಯಂ -4 ಮಿಷನ್‌ನ ಭಾಗವಾಗಿ ಗಗನಯಾನ ಕೈಗೊಂಡಿದ್ದ ಗಗನಯಾನಿಗಳಾದ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಮಂಗಳವಾರ ಮಧ್ಯಾಹ್ನ 3.01ರ ಸುಮಾರಿಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೊದಲ್ಲಿ ಬಂದು ಇಳಿದರು.

18 ದಿನಗಳ ವಾಸ್ತವ್ಯದ ನಂತರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಹೊರಟಿರುವ ಗಗನಯಾನಿಗಳು 22.5 ಗಂಟೆಗಳ ಪ್ರಯಾಣ ಮಾಡಿ ಭೂಮಿಗೆ ತಲುಪಿದರು.

ಬಾಹ್ಯಾಕಾಶದಿಂದ ಭೂಮಿಗೆ ಬಂದ ನಾಲ್ವರು ಗಗನಯಾನಿಗಳ ಈ ಪಯಣದ ನೇರ ಪ್ರಸಾರವನ್ನು ಆಕ್ಸಿಯಂ ಮಿಷನ್‌ ನೇರ ಪ್ರಸಾರ ಮಾಡುತ್ತಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.