ಫಾಲ್ಕನ್ -9 ರಾಕೆಟ್
ನವದೆಹಲಿ: ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರೆ ಮೂವರ ಅಂತರಿಕ್ಷಯಾನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಸ್ಪೇಸ್‌ಎಕ್ಸ್ ತಿಳಿಸಿದೆ.
ಸ್ಪೇಸ್‌ಎಕ್ಸ್‌ನ ಫಾಲ್ಕನ್ -9 ರಾಕೆಟ್‌ನಲ್ಲಿ ಸೋರಿಕೆಯಾಗಿದ್ದರಿಂದ ಅಂತರಿಕ್ಷಯಾನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
'ಪೋಸ್ಟ್-ಸ್ಟ್ಯಾಟಿಕ್ ಫೈರ್ ಬೂಸ್ಟರ್ ಪರಿಶೀಲನೆಯ ಸಮಯದಲ್ಲಿ ಲಿಕ್ವಿಡ್ ಆಕ್ಸಿಜನ್ (LOx) ಸೋರಿಕೆಯಾಗಿರುವುದು ಕಂಡುಬಂದಿದೆ. ಫಾಲ್ಕನ್-9 ರಾಕೆಟ್‌ನಲ್ಲಿ ಸೋರಿಕೆಯನ್ನು ಸರಿಪಡಿಸಲು ಎಂಜಿನಿಯರ್‌ಗಳು ಹೆಚ್ಚಿನ ಸಮಯವನ್ನು ಕೋರಿದ್ದಾರೆ' ಎಂದು ಸ್ಪೇಸ್‌ಎಕ್ಸ್ ತಿಳಿಸಿದೆ.
'ಸೋರಿಕೆಯನ್ನು ಸರಿಪಡಿಸಿದ ಬಳಿಕ ಹೊಸ ಉಡ್ಡಯನ ದಿನಾಂಕವನ್ನು ನಿಗದಿಪಡಿಸಲಿದ್ದೇವೆ' ಎಂದು ತಿಳಿಸಿದೆ.
'ಆ್ಯಕ್ಸಿಯಂ–4' ಮಿಷನ್ ಭಾಗವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ತೆರಳಲು ಶುಕ್ಲಾ ಅವರೊಂದಿಗೆ, ಕಮಾಂಡರ್ ಪೆಗ್ಗಿ ವಿಟ್ಸನ್, ಹಂಗರಿಯ ಟಿರ್ಬೊ ಕಾಪು ಹಾಗೂ ಪೋಲಂಡ್‌ನ ಸ್ಲಾವೋಸ್ ಯು.ವಿನ್ಸವ್ಸ್‌ಕಿ ಪಯಣಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.