ಸ್ಪೇಸ್‌ಎಕ್ಸ್ ರಾಕೆಟ್
(ಚಿತ್ರ ಕೃಪೆ: X/@SpaceX)
ಆಸ್ಟಿನ್ (ಅಮೆರಿಕ): ಉದ್ಯಮಿ ಇಲಾನ್ ಮಸ್ಕ್ ಒಡೆತನದ ಸ್ಪೇಸ್‌ಎಕ್ಸ್ ರಾಕೆಟ್, ದೈನಂದಿನ ಪರೀಕ್ಷೆಯ ವೇಳೆ ಸ್ಫೋಟಗೊಂಡಿರುವ ಘಟನೆ ಅಮೆರಿಕದ ಟೆಕ್ಸಾಸ್‌ನಿಂದ ವರದಿಯಾಗಿದೆ.
ಘಟನೆಯಲ್ಲಿ ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ. ಆದರೆ ಸ್ಫೋಟದ ತೀವ್ರತೆಗೆ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಆವರಿಸಿತ್ತು.
'ಸ್ಟಾರ್‌ಬೇಸ್‌ನಲ್ಲಿ ಹತ್ತನೇ ಹಾರಾಟದ ಪರೀಕ್ಷೆಗೆ ತಯಾರಿ ನಡೆಸುತ್ತಿರುವಾಗ ಅವಘಡ ಸಂಭವಿಸಿದೆ. ಎಲ್ಲ ಸಿಬ್ಬಂದಿ ಸುರಕ್ಷಿತರಾಗಿದ್ದಾರೆ' ಎಂದು ಸ್ಪೇಸ್‌ಎಕ್ಸ್ ಸ್ಪಷ್ಟನೆ ನೀಡಿದೆ.
'ಸ್ಥಳೀಯ ಅಧಿಕಾರಿಗಳ ಸಹಾಯದಿಂದ ಪರೀಕ್ಷಾ ಕೇಂದ್ರ ಹಾಗೂ ಸುತ್ತುಮುತ್ತಲಿನ ಪ್ರದೇಶವನ್ನು ಸುರಕ್ಷಿತವಾಗಿರಿಸಲು ನಮ್ಮ ಸ್ಟಾರ್‌ಬೇಸ್ ತಂಡ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿವೆ. ಹತ್ತಿರದ ಪ್ರದೇಶದಲ್ಲಿ ಯಾವುದೇ ಹಾನಿಯಾಗಿಲ್ಲ. ರಕ್ಷಣಾ ಕಾರ್ಯ ನಡೆಯುತ್ತಿರುವಾಗ ಅಲ್ಲಿಗೆ ಹೋಗಲು ಯಾರೂ ಯತ್ನಿಸಬಾರದು' ಎಂದು ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.