ಸುನೀತಾ, ಬುಚ್
ಕೇಪ್ ಕೆನವೆರಲ್ (ಅಮೆರಿಕ): ಗಗನಯಾತ್ರಿಗಳಾದ ಭಾರತ ಮೂಲದ ಸುನಿತಾ ವಿಲಿಯಮ್ಸ್ ಹಾಗೂ ಅಮೆರಿಕದ ಬುಚ್ ವಿಲ್ಮೋರ್ ಅವರು ಮಾರ್ಚ್ 19ರಂದು ಬೆಳಗಿನ ಜಾವ 3:27ರ ಸುಮಾರಿಗೆ (ಭಾರತೀಯ ಕಾಲಮಾನ) ಫ್ಲೋರಿಡಾ ಕರಾವಳಿಯಲ್ಲಿ ಇಳಿಯಲಿದ್ದಾರೆ.
ಮಂಗಳವಾರ ಬೆಳಿಗ್ಗೆ 10:35ಕ್ಕೆ (ಭಾರತೀಯ ಕಾಲಮಾನ) ಬಾಹ್ಯಾಕಾಶ ನೌಕೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ಐಎಸ್‌ಎಸ್) ಬೇರ್ಪಟ್ಟಿದೆ. ಅಂದರೆ ಅನ್‌ಡಾಕ್ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದ್ದು ಸುನೀತಾ ವಿಲಿಯಮ್ಸ್ ಭೂಮಿಯ ಕಡೆ ಪ್ರಯಾಣ ಆರಂಭಿಸಿದ್ದಾರೆ. ಅದರ ವಿಡಿಯೋವನ್ನು ನಾಸಾ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.
17 ಗಂಟೆಗಳ ಪ್ರಯಾಣ: ಸುನೀತಾ ವಿಲಿಯಮ್ಸ್ ತಂಡ ಭೂಮಿ ತಲುಪಲು 17 ಗಂಟೆಗಳ ಪ್ರಯಾಣಿಸಲಿದೆ ಎಂದು ನಾಸಾ ಹೇಳಿದೆ.
ಕಳೆದ ಒಂಬತ್ತು ತಿಂಗಳಿನಿಂದ ಐಎಸ್‌ಎಸ್‌ನಲ್ಲಿ ಸಿಲುಕಿಕೊಂಡಿದ್ದ ಸುನಿತಾ ಹಾಗೂ ಬುಚ್ ಅವರು ಭೂಮಿಗೆ ವಾಪಸಾಗುತ್ತಿದ್ದಾರೆ.
ಬೋಯಿಂಗ್ ಸಂಸ್ಥೆಯ ಸ್ಟಾರ್‌ಲೈನರ್ ಗಗನನೌಕೆಯಲ್ಲಿ ಕಳೆದ ವರ್ಷ ಜೂನ್ 5ರಂದು ಐಎಸ್‌ಎಸ್‌ಗೆ ತೆರಳಿದ್ದ ಸುನಿತಾ ಹಾಗೂ ವಿಲ್ಮೋರ್, 9 ದಿನಗಳ ನಂತರ ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗಿರಲಿಲ್ಲ.
ಗಗನಯಾತ್ರಿಗಳಿಬ್ಬರ ಸುರಕ್ಷಿತ ವಾಪಸಾತಿಗೆ ಪ್ರಪಂಚಾದ್ಯಂತ ಜನರು ಪ್ರಾರ್ಥಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.