ರಣವೀರ್ ಅಲಾಹಬಾದಿಯಾ
(ಚಿತ್ರ ಕೃಪೆ: Instagram/@beerbiceps)
ಗುವಾಹಟಿ: ಪೋಷಕರು ಮತ್ತು ಲೈಂಗಿಕತೆಯ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿ ವಿವಾದಕ್ಕೆ ಸಿಲುಕಿರುವ ಇನ್‌ಫ್ಲುಯೆನ್ಸರ್, ಯೂಟ್ಯೂಬರ್ ರಣವೀರ್ ಇಲಾಹಾಬಾದಿಯಾ ವಿರುದ್ಧ ಗುವಾಹಟಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಆನ್‌ಲೈನ್ ಶೋನಲ್ಲಿ ಅಶ್ಲೀಲತೆ ಪ್ರಚಾರಕ್ಕೆ ಸಂಬಂಧಿಸಿದಂತೆ ನಗರದ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ರಣವೀರ್ ಇಲಾಹಾಬಾದಿಯಾ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
31 ವರ್ಷದ ಪಾಡ್‌ಕಾಸ್ಟರ್ ರಣವೀರ್ ಅಲ್ಲದೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಸಮಯ್ ರೈನಾ, ಆಶಿಶ್ ಚಂಚಲಾನಿ, ಜಸ್‌ಪ್ರೀತ್ ಸಿಂಗ್ ಮತ್ತು ಅಪೂರ್ವ ಮಖಿಜಾ ವಿರುದ್ಧ ಪ್ರಕರಣ ದಾಖಲಾಗಿದೆ.
'ಬಿಯರ್ ಬೈಸೆಪ್ಸ್' ಎಂದೇ ಪ್ರಸಿದ್ಧರಾಗಿರುವ ಇಲಾಹಾಬಾದಿಯಾ, ರೈನಾ ಅವರ ಯೂಟ್ಯೂಬ್ ಶೋ 'ಇಂಡಿಯಾಸ್ ಗಾಟ್ ಲ್ಯಾಟೆಂಟ್' ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದರು.
ಇದರ ಬೆನ್ನಲ್ಲೇ ಇಲಾಹಾಬಾದಿಯಾ ವಿರುದ್ಧ ಭಾರಿ ಆಕ್ರೋಶ ಭುಗಿಲೆದ್ದಿತ್ತು. ಬಳಿಕ ತಮ್ಮ ಹೇಳಿಕೆಗಾಗಿ ಕ್ಷಮೆಯಾಚಿಸಿದ್ದರು.
ಸದ್ಯ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.