ADVERTISEMENT

ಗಲಭೆ: ವಾಟ್ಸ್‌ಆ್ಯಪ್‌, ಟ್ವಿಟರ್‌ ಮಾಹಿತಿ ಕೋರಲು ನಿರ್ಧಾರ

ಪಿಟಿಐ
Published 19 ಮಾರ್ಚ್ 2020, 20:15 IST
Last Updated 19 ಮಾರ್ಚ್ 2020, 20:15 IST
ವಾಟ್ಸ್‌ಆಪ್
ವಾಟ್ಸ್‌ಆಪ್   

ನವದೆಹಲಿ: ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚೋದನಕಾರಿ ವಿಚಾರಗಳನ್ನು ಪ್ರಕಟಿಸಿದವರು ಯಾರು ಎಂಬುದನ್ನು ಪತ್ತೆ ಮಾಡಲು ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಮತ್ತು ಟ್ವಿಟರ್‌ ಅನ್ನು ಕೋರಲಾಗುವುದು ಎಂದು ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸೌಹಾರ್ದ ಸಮಿತಿಯು ನಿರ್ಧರಿಸಿದೆ.

ಈಶಾನ್ಯ ದೆಹಲಿಯಲ್ಲಿ ಕಳೆದ ತಿಂಗಳು ಗಲಭೆ ತೀವ್ರಗೊಂಡ ಸಂದರ್ಭದಲ್ಲಿ, ವದಂತಿ ಮತ್ತು ದ್ವೇಷ ಭಾಷಣವನ್ನು ತಡೆಯುವುದ
ಕ್ಕಾಗಿ ಈ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಈಗಾಗಲೇ 14 ದೂರುದಾರರು ಮತ್ತು ಸಾಮಾಜಿಕ ಜಾಲ ತಾಣದಲ್ಲಿ ಪ್ರಚೋದನಕಾರಿ ವಿಚಾರಗಳನ್ನು ಹಂಚಿಕೊಂಡ ಆರೋಪ ಹೊತ್ತಿರುವ ವ್ಯಕ್ತಿಯೊಬ್ಬರ ಹೇಳಿಕೆ ದಾಖಲಿಸಿಕೊಂಡಿದೆ.

ಪ್ರಚೋದನಕಾರಿ ವಿಚಾರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಬಾರದು ಎಂಬ ಕಾನೂನು ಇರುವುದು ತಮಗೆ ತಿಳಿದಿರಲಿಲ್ಲ ಎಂದು ಆರೋಪಿಯು ಹೇಳಿದ್ದಾರೆ. ಅವರು ಕ್ಷಮೆಯನ್ನೂ ಕೋರಿದ್ದಾರೆ ಎಂದು ಸಮಿತಿಯು ತಿಳಿಸಿದೆ.

ADVERTISEMENT

‘ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿರುವ ಪ್ರಚೋದನಕಾರಿ ಹೇಳಿಕೆಗಳನ್ನು ಅಳಿಸುವುದಾಗಿ ಮತ್ತು ಕ್ಷಮಾಪಣೆಯ ಹೇಳಿಕೆಯನ್ನು ಪ್ರಕಟಿಸುವುದಾಗಿ ಆರೋಪಿಯು ಭರವಸೆ ನೀಡಿದ್ದಾರೆ’ ಎಂದು ಸಮಿತಿಯ ಅಧ್ಯಕ್ಷ ಶಾಸಕ ರಾಘವ ಚಡ್ಡಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.