ADVERTISEMENT

ಮಾತೃಸಂಸ್ಥೆಯ ಹೆಸರು ಬದಲಿಸಿದ ಫೇಸ್‌ಬುಕ್‌

ಏಜೆನ್ಸೀಸ್
Published 29 ಅಕ್ಟೋಬರ್ 2021, 0:46 IST
Last Updated 29 ಅಕ್ಟೋಬರ್ 2021, 0:46 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಸ್ಯಾನ್‌ಫ್ರಾನ್ಸಿಸ್ಕೊ: ಫೇಸ್‌ಬುಕ್‌ನ ಮಾತೃಸಂಸ್ಥೆಯ ಹೆಸರು ‘ಮೆಟಾ’ ಎಂದು ಬದಲಾಗಲಿದೆ. ಫೇಸ್‌ಬುಕ್‌ ಜಾಲತಾಣದ ಮುಖ್ಯಸ್ಥ ಮಾರ್ಕ್‌ ಜ್ಯುಕರ್‌ಬರ್ಗ್‌ ಈ ವಿಷಯ ಪ್ರಕಟಿಸಿದರು.

‘ಮೆಟಾ’ ಸಾಮಾಜಿಕ ಜಾಲತಾಣವನ್ನು ಇನ್ನೊಂದು ಹಂತಕ್ಕೆ ಒಯ್ಯಲಿದೆ ಎಂದು ಹೇಳಿದ್ದಾರೆ. ಸಾಮಾಜಿಕ ವಿಷಯಗಳ ಜೊತೆಗಿನ ಜಂಜಾಟಗಳಿಂದ ಸಾಕಷ್ಟು ಕಲಿತಿದ್ದೇವೆ. ನಾವು ಕಲಿತಿದ್ದು ಹೊಸ ಅಧ್ಯಾಯ ರೂಪಿಸಲು ನೆರವಾಗಲಿದೆ ಎಂದು ಅವರು ಡೆವಲಪರ್‌ಗಳ ವಾರ್ಷಿಕ ಸಮ್ಮೇಳನದಲ್ಲಿ ಹೇಳಿದರು.

ಆದರೆ, ನಮ್ಮ ಅಪ್ಲಿಕೇಷನ್‌ಗಳು ಹಾಗೂ ಅವರು ಬ್ರಾಂಡ್‌ಗಳು ಬದಲಾಗುತ್ತಿಲ್ಲ’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.