ADVERTISEMENT

Happy Holi 2022: ಎಲ್ಲೆಡೆ ಬಣ್ಣದ ಹಬ್ಬ ಹೋಳಿ ಸಂಭ್ರಮ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಮಾರ್ಚ್ 2022, 6:34 IST
Last Updated 18 ಮಾರ್ಚ್ 2022, 6:34 IST
ಗುವಾಹಟಿಯಲ್ಲಿ ಮಕ್ಕಳಿಂದ ಹೋಳಿ ಹಬ್ಬದ ಆಚರಣೆ
ಗುವಾಹಟಿಯಲ್ಲಿ ಮಕ್ಕಳಿಂದ ಹೋಳಿ ಹಬ್ಬದ ಆಚರಣೆ    

ಬೆಂಗಳೂರು: ಕೋವಿಡ್‌ನಿಂದ ಎರಡು ವರ್ಷ ಕಳೆಗುಂದಿದ್ದ ಹೋಳಿ ಹಬ್ಬದ ಸಂಭ್ರಮ ಈ ವರ್ಷ ಮರಳಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ಗಣ್ಯರು ಹೋಳಿ ಹಬ್ಬದ ಶುಭಾಶಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲೂ ಹೋಳಿ ಹಬ್ಬದ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡ್ ಆಗಿವೆ. ಟ್ವಿಟರ್‌ ಬಳಕೆದಾರರು #HappyHoli #Holi #HappyHoli2022 ಹ್ಯಾಶ್‌ಟ್ಯಾಗ್‌ ಬಳಸಿ ಶುಭಾಶಯಗಳನ್ನು ಕೋರುತ್ತಿದ್ದಾರೆ.

ಹೋಳಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಬಣ್ಣದ ಹಬ್ಬ ಎಂದೇ ಪ್ರಸಿದ್ಧಿಯಾಗಿರುವ ಹೋಳಿ ಹಬ್ಬದಲ್ಲಿ ವಿದ್ಯಾರ್ಥಿಗಳಿಂದ ಹಿಡಿದು ಎಲ್ಲ ವರ್ಗದ ಜನರು ಒಬ್ಬರಿಗೊಬ್ಬರು ಬಣ್ಣಗಳನ್ನು ಹಚ್ಚಿ ಸಂತಸವನ್ನು ಹಂಚಿಕೊಳ್ಳುತ್ತಾರೆ.

ಸೋಷಿಯಲ್ ಮೀಡಿಯಾದಲ್ಲೂಹೋಳಿ ಟ್ರೆಂಡ್...

ಪ್ರಧಾನಿ ನರೇಂದ್ರ ಮೋದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.