ADVERTISEMENT

109 ಬಾರಿ ಇಂಟರ್‌‌ನೆಟ್ ಸ್ಥಗಿತ: ವಿಶ್ವದಲ್ಲೇ ಭಾರತ ಅಗ್ರ ಸ್ಥಾನ

ಡೆಕ್ಕನ್ ಹೆರಾಲ್ಡ್
Published 4 ಮಾರ್ಚ್ 2021, 9:51 IST
Last Updated 4 ಮಾರ್ಚ್ 2021, 9:51 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸರ್ಕಾರಗಳು ಇಂಟರ್‌ನೆಟ್ ಸಂಪರ್ಕ ಸ್ಥಗಿತಗೊಳಿಸುವುದು ಇತ್ತೀಚೆಗೆ ಹೆಚ್ಚಾಗುತ್ತಿದೆ. ಆದರೆ ಜಾಗತಿಕವಾಗಿ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸುವ ದೇಶಗಳ ಪೈಕಿ, ಭಾರತ ನಂಬರ್ 1 ಸ್ಥಾನದಲ್ಲಿದೆ ಎಂದು ವರದಿಯೊಂದು ಹೇಳಿದೆ.

ವಿವಿಧ ಕಾರಣಗಳಿಗೆ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸುವ ರಾಷ್ಟ್ರಗಳ ಕುರಿತು ಅಕ್ಸೆಸ್ ನೌ ವರದಿ ತಯಾರಿಸಿದ್ದು, 2020ರಲ್ಲಿ ಒಟ್ಟು 109 ಬಾರಿ ವಿವಿಧ ತಾಣಗಳಲ್ಲಿ ದೇಶದಲ್ಲಿ ಇಂಟರ್‌ನೆಟ್ ಸ್ಥಗಿತವಾಗಿತ್ತು ಎಂದು ಹೇಳಿದೆ. ಅಲ್ಲದೆ, ಎರಡನೇ ಸ್ಥಾನದಲ್ಲಿರುವ ಯೆಮೆನ್‌ನಲ್ಲಿ ಒಟ್ಟು 6 ಬಾರಿ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿತ್ತು ಎಂದು ಅಕ್ಸೆಸ್ ನೌ ಹೇಳಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಅತಿ ಹೆಚ್ಚು ಬಾರಿ ಅಂದರೆ, 18 ತಿಂಗಳ ಕಾಲ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿತ್ತು, ಇದು ಪ್ರಜಾಪ್ರಭುತ್ವ ರಾಷ್ಟ್ರವೊಂದರಲ್ಲಿ ಅತಿ ಸುದೀರ್ಘ ಅವಧಿ ಎಂದು ವರದಿ ತಿಳಿಸಿದೆ.

ADVERTISEMENT
ಅಕ್ಸೆಸ್ ನೌ

ಜಮ್ಮು ಕಾಶ್ಮೀರ ಮಾತ್ರವಲ್ಲದೆ, ಲಾಕ್‌ಡೌನ್ ಅವಧಿಯಲ್ಲಿ ಸರ್ಕಾರ ದೇಶದ ವಿವಿಧ ಭಾಗಗಳಲ್ಲಿ ನಾನಾ ಕಾರಣಕ್ಕೆ ಇಂಟರ್‌ನೆಟ್ ಸಂಪರ್ಕ ಸ್ಥಗಿತಗೊಳಿಸಿತ್ತು. ಜತೆಗೆ ಮುಂಜಾಗ್ರತಾ ಕ್ರಮವಾಗಿ ಇಂಟರ್‌ನೆಟ್ ಸಂಪರ್ಕ ತೆಗೆಯಲಾಗಿತ್ತು ಎಂದು ಸರ್ಕಾರ ಹೇಳಿದೆಯಾದರೂ, ರಾಜಕೀಯ ಕಾರಣಗಳಿಗಾಗಿ ಹೆಚ್ಚಿನ ಸಂದರ್ಭದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ವರದಿ ಉಲ್ಲೇಖಿಸಿದೆ.

ಬಾಂಗ್ಲಾದೇಶ, ಮ್ಯಾನ್ಮಾರ್, ಯೆಮೆನ್, ಇಥಿಯೋಪಿಯಾ ಸಹಿತ ವಿವಿಧ ರಾಷ್ಟ್ರಗಳಲ್ಲಿ ಇಂಟರ್‌ನೆಟ್ ಸ್ಥಗಿತ ಮಾಡಲಾಗಿತ್ತು ಎಂದು ಅಕ್ಸೆಸ್ ನೌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.