ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಇಂದು (ಬುಧವಾರ) ಮುಂಜಾನೆ ಕ್ಷಿಪಣಿ ದಾಳಿ ನಡೆಸಿದೆ. ಈ ಪ್ರತೀಕಾರದ ದಾಳಿಯ ಬಗ್ಗೆ ರಾಜಕೀಯ ಮುಖಂಡರು, ಸೆಲೆಬ್ರಿಟಿಗಳು, ಕ್ರಿಕೆಟಿಗರು ಸೇರಿದಂತೆ ಸಾರ್ವಜನಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯಿಸಿದ್ದಾರೆ.
ಪಾಕ್ ಮೇಲೆ ಭಾರತ ನಡೆಸಿರುವ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ವಿಡಿಯೊ ಮತ್ತು ಫೋಟೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಅನೇಕರು ಸಂತಸ ವ್ಯಕ್ತಪಡಿಸಿದ್ದಾರೆ. ಜತೆಗೆ, ‘ಭಾರತ್ ಮಾತಾ ಕಿ ಜೈ’ ಮತ್ತು ‘ಜೈ ಹಿಂದ್’ ದೇಶಭಕ್ತಿಯ ಘೋಷಣೆಗಳನ್ನು ಪೋಸ್ಟ್ ಮಾಡಿದ್ದಾರೆ.
#IndiaPakistanWar #OperationSindoor #BharatMataKiJai #JaiHind #IndiaPakistanWar #IndiaPakistan #JusticeIsServed #BharatMata #Airstrike #WeAreNotInDanger #IndianAirForce ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್ ಆಗಿವೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಉಗ್ರ ಸಂಘಟನೆಗಳ ಒಂಬತ್ತು ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಕಾರ್ಯಾಚರಣೆಯನ್ನು ನಡೆಸಿದೆ. ಕಾರ್ಯಾಚರಣೆಯ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.
‘ಧರ್ಮೋ ರಕ್ಷತಿ ರಕ್ಷಿತಃ’ ಎಂದು ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಆಪರೇಷನ್ ಸಿಂಧೂರ... ಜೈ ಹಿಂದ್’ ಎಂದು ಮಾಜಿ ಕ್ರಿಕೆಟರ್ ಸುರೇಶ್ ರೈನ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಹ್ಯಾಪಿ ದೀಪಾವಳಿ ಪಾಕಿಸ್ತಾನ್, ಇಂಡಿಯನ್ ಆರ್ಮಿ ಜೈ ಹಿಂದ್’ ಎಂದು ಬರೆದುಕೊಂಡಿರುವ ವಾಯ್ಸ್ ಆಫ್ ಭಾರತ್‌ವರ್ಷ ಎಂಬ ‘ಎಕ್ಸ್’ ಪುಟದಲ್ಲಿ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ.
‘ನಾವು ಅಪಾಯದಲ್ಲಿ ಇಲ್ಲ. ನಾವೇ ಅಪಾಯ, ಜೈ ಹಿಂದ್, ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯ. ಭಾರತ ಮಾತಾಕೀ ಜೈ’ ಎಂದು ಯಧುಷ್ಠಿರ ಚಂದ್ರ ಎಂಬುವರು ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.