ADVERTISEMENT

ಕುಡಿದು ಪೊಲೀಸರೊಂದಿಗೆ ಅನುಚಿತ ವರ್ತನೆ: ಕಾರ್ಮಿಕ ಇಲಾಖೆ ಆಯುಕ್ತೆ ವಿರುದ್ಧ ದೂರು!

​ಪ್ರಜಾವಾಣಿ ವಾರ್ತೆ
Published 2 ಮೇ 2022, 13:53 IST
Last Updated 2 ಮೇ 2022, 13:53 IST
ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ: ಕಾರ್ಮಿಕ ಇಲಾಖೆ ಆಯುಕ್ತೆ
ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ: ಕಾರ್ಮಿಕ ಇಲಾಖೆ ಆಯುಕ್ತೆ   

ಲಖನೌ: ಉತ್ತರಪ್ರದೇಶದಲ್ಲಿ ಕಾರ್ಮಿಕ ಇಲಾಖೆಯ ಉಪ ಆಯುಕ್ತೆ ರಚನಾ ಕೆಸರ್ವಾನಿ ಮದ್ಯಪಾನ ಮಾಡಿ, ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್‌ ಆಗಿದೆ.

ಕಾರ್ಮಿಕ ದಿನಾಚರಣೆ ದಿನವೇ ಈ ಘಟನೆ ನಡೆದಿದೆ. ಕಂಠಪೂರ್ತಿ ಕುಡಿದಿದ್ದ ರಚನಾ ಕಾರು ಚಲಾಯಿಸುತ್ತಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆದು ಪರೀಕ್ಷಿಸಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ರಚನಾ, ನಾನು ಕುಡಿದಿಲ್ಲ ಎಂದು ರಂಪಾಟ ಮಾಡಿದ್ದಾರೆ. ಪೊಲೀಸರು ಅವರ ವಿರುದ್ಧ ದೂರು ದಾಖಲಿಸಿದ್ದಾರೆ.

ಇತ್ತ ಕಾರ್ಮಿಕ ಇಲಾಖೆಯ ಸಚಿವರು ರಚನಾ ವಿರುದ್ಧ ತನಿಖೆಗೆ ಆದೇಶ ಮಾಡಿದ್ದಾರೆ. ರಚನಾ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಟ್ರೆಂಡ್‌ ಆಗಿದೆ.

ADVERTISEMENT

ರಚನಾ ವರ್ತನೆ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.