ADVERTISEMENT

ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಮೇಲೆ ಹಲ್ಲೆ, ಬಂದೂಕು ಹಿಡಿದು ಬೆದರಿಕೆ ಹಾಕಿದ ಮಹಿಳೆ

ಪಿಟಿಐ
Published 17 ಜೂನ್ 2025, 4:51 IST
Last Updated 17 ಜೂನ್ 2025, 4:51 IST
   

ಲಖನೌ; ಪೆಟ್ರೋಲ್‌ ಬಂಕ್‌ ಸಿಬ್ಬಂದಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಬಂದೂಕು ಹಿಡಿದು ಮಹಿಳೆಯೊಬ್ಬರು ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶದ ಹರ್ದೋಯ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಲ್‌ಗ್ರಾಮ್ ಪಟ್ಟಣದ ಸ್ಯಾಂಡಿ ರಸ್ತೆಯಲ್ಲಿರುವ ಪೆಟ್ರೋಲ್‌ ಬಂಕ್‌ನಲ್ಲಿ ಈ ಘಟನೆ ನಡೆದಿದೆ.

ಕಾರಿಗೆ ಸಿಎನ್‌ಜಿ ಇಂಧನ ತುಂಬಿಸಲು ಪೆಟ್ರೋಲ್‌ ಬಂಕ್‌ಗೆ ಬಂದಿದ್ದ ಕುಟುಂಬವೊಂದು ಅಲ್ಲಿನ ಸಿಬ್ಬಂದಿ ರಜನೀಶ್ ಕುಮಾರ್ ಅವರೊಂದಿಗೆ ಗಲಾಟೆ ಮಾಡಿಕೊಂಡಿದೆ. ಸುರಕ್ಷತೆಯ ಕ್ರಮದ ಭಾಗವಾಗಿ ಕುಟುಂಬದ ಸದಸ್ಯರನ್ನು ವಾಹನದಿಂದ ಕೆಳಗಿಳಿಯುವಂತೆ ಮನವಿ ಮಾಡಿದ್ದರು. ಆದರೆ ಇದೇ ವಿಚಾರಕ್ಕೆ ಸಿಬ್ಬಂದಿ ಮತ್ತು ಕುಟುಂಬದ ನಡುವೆ ಮಾತಿನ ಚಕಮಕಿ ನಡೆದಿದೆ.

ADVERTISEMENT

ಈ ವೇಳೆ ಮಹಿಳೆಯೊಬ್ಬರು ಸಿಬ್ಬಂದಿ ಎದೆಗೆ ಬಂದೂಕು ಇಟ್ಟು, ‘ಗುರುತು ಸಿಗದ ರೀತಿ ಗುಂಡು ಹಾರಿಸಿ ಕೊಲ್ಲುತ್ತೇನೆ‘ ಎಂದು ಬೆದರಿಕೆ ಹಾಕಿದ್ದಾಳೆ. ಈ ದೃಶ್ಯಗಳು ಪೆಟ್ರೋಲ್‌ ಬಂಕ್‌ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಇದೀಗ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಸಂಬಂಧ ರಜನೀಶ್ ಕುಮಾರ್ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಸೇರಿದಂತೆ ಆಕೆಯ ಕುಟುಂಬ ಸದಸ್ಯರ ವಿರುದ್ಧವೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.