
ಸ್ಮೃತಿ ಮಂದಾನ
(ಪಿಟಿಐ ಚಿತ್ರ)
ಬೆಂಗಳೂರು: ಇತ್ತೀಚಿಗಷ್ಟೇ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಜೊತೆಗಿನ ವಿವಾಹ ಹಠಾತ್ ನಿಂತು ಹೋದ ಕುರಿತಂತೆ ಭಾರತದ ಮಹಿಳೆಯರ ಕ್ರಿಕೆಟ್ ತಂಡದ ಉಪ ನಾಯಕಿ ಸ್ಮೃತಿ ಮಂದಾನ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ಎರಡೂ ಕುಟುಂಬಗಳ ಖಾಸಗಿತನವನ್ನು ಗೌರವಿಸುವಂತೆ ಮಾಧ್ಯಮಗಳು ಮತ್ತು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ನಡುವೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸ್ಮೃತಿ ಮಂದಾನಗೆ ಬೆಂಬಲ ವ್ಯಕ್ತಪಡಿಸಿ ಅವರ ಅಭಿಮಾನಿಗಳು ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಮತ್ತೆ ಕೆಲವರು ಖಾಸಗಿತನವನ್ನು ಗೌರವಿಸಿ ಎಂದು ಹೇಳುವವರು ಪೋಸ್ಟ್ ಅನ್ನು ಏಕೆ ಹಂಚಿಕೊಂಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
ಮಂದಾನಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಟ್ರೋಲ್‌ಗಳ ಮೂಲಕ ನೆಟ್ಟಿಗರು ಹಾಗೂ ಅವರ ಅಭಿಮಾನಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಇದೀಗ ಹ್ಯಾಶ್‌ಟ್ಯಾಗ್ #SmritiMandhana ಟ್ರೆಂಡ್ ಆಗಿದೆ.
ಸ್ಮೃತಿ ಮಂದಾನಗೆ ಬೆಂಬಲ ವ್ಯಕ್ತಪಡಿಸುವ ನಿಟ್ಟಿನಲ್ಲಿ ಟ್ವಿಟರ್ ತನ್ನ ಲೈಕ್ ಬಟನ್ ಅನ್ನು ಬದಲಾಯಿಸಿದೆ. ಈ ಮೂಲಕ ಅವರಿಗೆ ಧೈರ್ಯ ತುಂಬಿದೆ ಎಂದು ಕೆಲವರು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಆದರೆ ಈ ಬಗ್ಗೆ ಖಚಿತತೆ ಇಲ್ಲ.
ಮತ್ತೊಂದೆಡೆ ಸ್ಮೃತಿ ಮಂದಾನ ವಿಚಾರದಲ್ಲಿ ಬಿಸಿಸಿಐ ಯಾವುದೇ ಪ್ರತಿಕ್ರಿಯೆ ಅಥವಾ ಬೆಂಬಲ ಸೂಚಿಸದೇ ನಿದ್ರಿಸುತ್ತಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.