ಸಾಮಾಜಿಕ ಮಾಧ್ಯಮ ಎಕ್ಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ
ರಾಯಿಟರ್ಸ್ ಚಿತ್ರ
ನವದೆಹಲಿ: ಜಾಗತಿಕವಾಗಿ ಹಲವು ಬಳಕೆದಾರರಿಗೆ ಸಾಮಾಜಿಕ ಮಾಧ್ಯಮ ಎಕ್ಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಿದೆ. ಆ್ಯಪ್‌ಗೆ ಲಾಗ್‌ಇನ್ ಆಗಲು ಅಥವಾ ಹೊಸ ವಿಚಾರಗಳು ಲೋಡ್ ಆಗುತ್ತಿಲ್ಲ ಎಂದು ದೂರಿದ್ದಾರೆ.
ಕೆಲವು ದಿನಗಳ ಹಿಂದೆ ಫೇಸ್ಬುಕ್ ಮತ್ತು ಇನ್‌ಸ್ಟಾಗ್ರಾಂ ಕೂಡ ಸಮಸ್ಯೆ ಎದುರಿಸಿತ್ತು.
ಸೋಮವಾರ ಮಧ್ಯಾಹ್ನ 3.15ರ ಹೊತ್ತಿಗೆ ಡೌನ್ ಡಿಟೆಕ್ಟರ್‌ನಲ್ಲಿ ಭಾರತದಲ್ಲಿ 2 ಸಾವಿರಕ್ಕೂ ಹೆಚ್ಚು ಸೇರಿ ಜಾಗತಿಕವಾಗಿ 17 ಸಾವಿರಕ್ಕೂ ಹೆಚ್ಚು ದೂರುಗಳು ಬಂದಿವೆ ಎಂದು ವರದಿಯಾಗಿದೆ.
ಕೆಲ ಹೊತ್ತಿನ ಬಳಿಕ ಎಕ್ಸ್ ಮೊದಲಿನಂತೆ ಕಾರ್ಯನಿರ್ವಹಿಸುತ್ತಿದೆ. ಈ ಕುರಿತು ಎಲಾನ್ ಮಸ್ಕ್ ಒಡೆತನ ಎಕ್ಸ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಮೀಮ್ಸ್‌ಗಳ ಮಹಾಪೂರ
ಸಾಮಾಜಿಕ ಮಾಧ್ಯಮ ಎಕ್ಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗುತ್ತಿದ್ದಂತೆ ಮೀಮ್ಸ್‌ಗಳು ಹರಿದಾಡಿವೆ. ಎಲಾನ್ ಮಸ್ಕ್ ಅವರನ್ನು ಟ್ಯಾಗ್ ಮಾಡಿ, ಏನಾಯಿತು ಸ್ನೇಹಿತ? ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.