ADVERTISEMENT

‘ಭಾರತದಲ್ಲಿ ನನಗೆ ಭವ್ಯ ಸ್ವಾಗತ’: ಅಮೆರಿಕದಿಂದ ಹೊರಡುವ ಮೊದಲು ಟ್ರಂಪ್ ಹೇಳಿಕೆ

ಏಜೆನ್ಸೀಸ್
Published 24 ಫೆಬ್ರುವರಿ 2020, 2:26 IST
Last Updated 24 ಫೆಬ್ರುವರಿ 2020, 2:26 IST
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (ಸಂಗ್ರಹ ಚಿತ್ರ)
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (ಸಂಗ್ರಹ ಚಿತ್ರ)   

ವಾಷಿಂಗ್‌ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎರಡು ದಿನಗಳ ಭೇಟಿಗಾಗಿ ಭಾನುವಾರ ಭಾರತಕ್ಕೆ ಪ್ರಯಾಣ ಬೆಳೆಸಿದರು. ‘ಈ ಹಿಂದೆ ಎಂದೂ ನಡೆಯದಅತಿದೊಡ್ಡ ಕಾರ್ಯಕ್ರಮವಾಗಲಿದೆ ನನ್ನ ಭಾರತ ಭೇಟಿ’ ಎಂದು ಟ್ರಂಪ್ ಹೊರಡುವ ಮೊದಲು ಹೇಳಿದರು.

ಪತ್ನಿ ಮೆಲಾನಿಯಾ ಟ್ರಂಪ್, ಅಧ್ಯಕ್ಷರ ಸಲಹೆಗಾರರೂ ಆಗಿರುವಪುತ್ರಿ ಇವಾಂಕಾ ಟ್ರಂಪ್ ಮತ್ತು ಅಳಿಯ ಜರೇದ್ ಕುಶ್ನೆರ್ ಜೊತೆಗೂಡಿ ಟ್ರಂಪ್ ವಿಮಾನ ಹತ್ತಿದರು. ಟ್ರಂಪ್ ಕುಟುಂಬದ ಜೊತೆಗೆ ಉನ್ನತ ಮಟ್ಟದ ನಿಯೋಗವೂ ಭಾರತಕ್ಕೆ ಭೇಟಿ ನೀಡುತ್ತಿದೆ.

‘ನಾನು ಭಾರತೀಯರೊಂದಿಗೆ ಬೆರೆಯುವುದನ್ನು ನಿರೀಕ್ಷಿಸುತ್ತಿದ್ದೇನೆ. ನನ್ನ ಕಾರ್ಯಕ್ರಮಕ್ಕೆ ಲಕ್ಷಾಂತರ ಜನರು ಬರಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನನ್ನ ಗೆಳೆಯ. ಇದು ಭಾರತದಲ್ಲಿ ಹಿಂದೆಂದೂ ನಡೆಯದಂಥ ದೊಡ್ಡ ಕಾರ್ಯಕ್ರಮವಾಗಲಿದೆ ಎಂದು ಮೋದಿ ಹೇಳಿದ್ದಾರೆ’ ಎಂದು ಟ್ರಂಪ್ ಹೇಳಿದ್ದಾರೆ.

ADVERTISEMENT

ಹೊರಡುವುದಕ್ಕೆ ಮೊದಲು ‘ಬಾಹುಬಲಿ–2’ ಸಿನಿಮಾದ ಎಡಿಟೆಡ್ವಿಡಿಯೊ ಪೋಸ್ಟ್ ಮಾಡಿದ್ದ ಟ್ರಂಪ್. ‘ಭಾರತದ ಗೆಳೆಯರನ್ನು ಭೇಟಿಯಾಗಲು ಕಾತರದಿಂದ್ದೇನೆ ಎಂದಿದ್ದರು.

‘ಎರಡು ವರ್ಷಗಳ ಹಿಂದೆ ಹೈದರಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದೆ. ಈಗ ಮತ್ತೆ ಭಾರತಕ್ಕೆ ಹಿಂದಿರುಗುತ್ತಿದ್ದೇನೆ. ಎರಡು ದೊಡ್ಡ ಪ್ರಜಾಪ್ರಭುತ್ವ ದೇಶಗಳ ನಂಟು ಇನ್ನಷ್ಟು ವೃದ್ಧಿಸಲಿ’ ಎಂದು ಡೊನಾಲ್ಡ್‌ ಟ್ರಂಪ್ ಪುತ್ರಿ ಇವಾಂಕಾ ಟ್ವೀಟ್ ಮಾಡಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ವಿಜಯ್ ರುಪಾಣಿ ಅವರು ಟ್ವೀಟ್ ಮಾಡಿದ್ದ ವಿಡಿಯೊ ಶೇರ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಸಹ ಅಮೆರಿಕ ಅಧ್ಯಕ್ಷರಿಗೆ ಸ್ವಾಗತ ಸಂದೇಶ ನೀಡಿದ್ದಾರೆ.

‘ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ವಾಗತಕ್ಕೆ ಭಾರತ ಕಾತರದಿಂದ ಕಾಯುತ್ತಿದೆ. ಅಹಮದಾಬಾದ್‌ನಲ್ಲಿ ನಡೆಯಲಿರುವ ಐತಿಹಾಸಿ ಸಮಾರಂಭದಲ್ಲಿ ಅವರು ಪಾಲ್ಗೊಳ್ಳುತ್ತಿರುವುದು ನಮಗೆ ಸಂದ ಗೌರವ’ ಎಂದು ಮೋದಿ ಹೇಳಿದ್ದಾರೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎರಡು ದಿನಗಳ ಭಾರತ ಭೇಟಿಗಾಗಿ ಸೋಮವಾರ ಬೆಳಿಗ್ಗೆ 11.40ರ ಹೊತ್ತಿಗೆ ಅಹಮದಾಬಾದ್‌ಗೆ ಬರಲಿದ್ದಾರೆ. ಈ ಭೇಟಿಯ ಫಲಶ್ರುತಿಯ ಬಗ್ಗೆ ಎರಡೂ ದೇಶಗಳಲ್ಲಿ ಬಾರಿ ಕುತೂಹಲ ಇದೆ.

ಮೊಟೆರಾದಲ್ಲಿರುವ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ‘ನಮಸ್ತೆ ಟ್ರಂಪ್‌’ ಕಾರ್ಯಕ್ರಮದಲ್ಲಿ ಟ್ರಂಪ್‌ ಭಾಗಿಯಾಗಲಿದ್ದಾರೆ. ಇದು ಜಗತ್ತಿನ ಅತ್ಯಂತ ದೊಡ್ಡ ಕ್ರಿಕೆಟ್‌ ಸ್ಟೇಡಿಯಂ ಎಂಬ ಹೆಗ್ಗಳಿಕೆ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಟ್ರಂಪ್‌ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.